ಸವಣೂರು ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ಫ್ರೆಷರ್ಸ್‌ಡೇ

0

ಪುತ್ತೂರು: ಹೊಸದಾಗಿ ಪದವಿ ತರಗತಿಗೆ ಸೇರ್ಪಡೆಗೊಂಡ ವಿದ್ಯಾರ್ಥಿಗಳನ್ನು ಸ್ವಾಗತಿಸುವ ಕಾರ್ಯಕ್ರಮ ಆ.8ರಂದು ಸವಣೂರು ವಿದ್ಯಾರಶ್ಮಿ ಪ್ರಥಮದರ್ಜೆ ಕಾಲೇಜಿನಲ್ಲಿ ನಡೆಯಿತು.
ಉದ್ಘಾಟಿಸಿದ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಯವರು ಪ್ರತಿಯೊಬ್ಬ ವಿಧ್ಯಾರ್ಥಿಯು ತನ್ನ ಜೀವನದಲ್ಲಿ ಶಿಸ್ತು, ಮಾನಸಿಕ ಸದೃಢತೆ, ನಿರಂತರ ಓದುವಿಕೆಯನ್ನು ಅಳವಡಿಸಿಕೊಂಡಾಗ ಜೀವನದಲ್ಲಿ ತಮ್ಮ ಗುರಿಯನ್ನು ಸಾದಿಸಬಹುದು ಎಂದರು. ಬೇರೆ ಬೇರೆ ಕಡೆಯಿಂದ ಬಂದಿರುವಂತಹ ಎಲ್ಲಾ ವಿದ್ಯಾರ್ಥಿಗಳು ಇಲ್ಲಿ ದೊರಕುವಂತಹ ಸದಾವಕಾಶವನ್ನು ಪಡೆದುಕೊಂಡು ಜವಬ್ದಾರಿಯುತ ಪ್ರಜೆಯಾಗಿ ರೂಪುಗೊಳ್ಳುವಂತೆ ಹಾರೈಸಿದರು.


ಸಂಸ್ಥೆಯ ಉಪಪ್ರಾಂಶುಪಾಲ ಶೇಷಗಿರಿ ಎಂ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರನ್ನು ವಿದ್ಯಾರ್ಥಿನಿಯಾದ ಕುಶಿತ ಸ್ವಾಗತಿಸಿ ಪ್ರಿಯಾಂಕ ವಂದನಾರ್ಪಣೆಗೈದರು. ಕಾರ್ಯಕ್ರಮದ ನಿರೂಪಣೆಯನ್ನು ದ್ವಿತೀಯ ಬಿ.ಸಿ.ಎ ವಿದ್ಯಾರ್ಥಿನಿಯಾದ ಪವಿತ್ರ ಇವರು ನಿರ್ವಹಿಸಿದರು. ವೇದಿಕೆಯಲ್ಲಿ ಉಪನ್ಯಾಸಕರಾದ ನಿರಂಜನ್.ವಿ ಹಾಗೂ ಪ್ರತಿಭಾ.ಭಟ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here