ಕಾಣಿಯೂರು: ವಿದ್ಯಾ ರಶ್ಮಿ ವಿದ್ಯಾಲಯ ಸವಣೂರಿನಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ವಿಭಾಗದ ಚದುರಂಗ ಸ್ಪರ್ಧೆಯಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಬಹುಮಾನಗಳನ್ನು ಪಡೆದುಕೊಂಡಿರುತ್ತಾರೆ.
ಪ್ರೌಢ ಶಾಲಾ ಬಾಲಕಿಯರ ವಿಭಾಗದಲ್ಲಿ ಸಾನ್ವಿಕ ಎಚ್ (9ನೇ) ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಶೇರ ಯಾದವ ಎಚ್ ಮತ್ತು ವೀಣಾಲತಾ ದಂಪತಿಗಳ ಪುತ್ರಿ . ಪ್ರಾಥಮಿಕ ಬಾಲಕರ ವಿಭಾಗದಲ್ಲಿ ಶ್ರೀರತ್ ವಿ ರೈ ಪಂಚಮ ಸ್ಥಾನವನ್ನು ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರು ಸುಳ್ಯ ತಾಲೂಕಿನ ಮುರುಳ್ಯ ಗ್ರಾಮದ ಓಟೋಳಿ ಶರತ್ ರೈ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೊಳಿಕ್ಕಳದ ಶಿಕ್ಷಕಿ ರೂಪ ಎಸ್ ರೈ ದಂಪತಿಗಳ ಪುತ್ರ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್ ಮಾರ್ಗದರ್ಶನ ನೀಡಿರುತ್ತಾರೆ.