ನೆಲ್ಯಾಡಿ ಶಬರೀಶ ಕಲಾಮಂದಿರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

0

ನೆಲ್ಯಾಡಿ: ಇಲ್ಲಿನ ಕಾಮಧೇನು ಮಹಿಳಾ ಸಹಕಾರ ಸಂಘದ ಸಹಯೋಗದಲ್ಲಿ ಕಾಮಧೇನು ಶ್ರೀ ವರಮಹಾಲಕ್ಷ್ಮಿ ಸೇವಾ ಸಮಿತಿ ವತಿಯಿಂದ ನೆಲ್ಯಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಶಬರೀಶ ಕಲಾಮಂದಿರದಲ್ಲಿ ಆ.8ರಂದು ಶ್ರೀ ವರಮಹಾಲಕ್ಷ್ಮಿ ಪೂಜೆ ನಡೆಯಿತು.


ತಿರ್ಲೆ ದೇವಸ್ಥಾನದ ಅರ್ಚಕರಾದ ಮಾಧವ ಸರಳಾಯ, ಅಮೃತ ಸರಳಾಯ ಅವರು ಪೂಜಾ ವಿಧಿವಿಧಾನ ನೆರವೇರಿಸಿದರು. ಮಧ್ಯಾಹ್ನ ನಡೆದ ಸಭಾ ಕಾರ್ಯಕ್ರಮದಲ್ಲಿ ಅತಿಥಿಯಾಗಿದ್ದ ಶ್ರೀ ಕ್ಷೇತ್ರ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿಯವರು ಮಾತನಾಡಿ, ಗೃಹಿಣಿಯೇ ಮನೆಯ ಲಕ್ಷ್ಮೀ. ಅವರ ಪರಿಶ್ರಮ, ಸಹನೆ, ಪ್ರೀತಿ ಹಾಗೂ ತ್ಯಾಗವೇ ಕುಟುಂಬವನ್ನು ಬೆಳೆಸುತ್ತದೆ. ವರಮಹಾಲಕ್ಷ್ಮಿ ವ್ರತದಂದು ದೇವಿಯನ್ನು ಪೂಜಿಸುವುದಷ್ಟೇ ಅಲ್ಲ, ನಿಮ್ಮೊಳಗಿನ ಶಕ್ತಿ, ಜ್ಞಾನ ಮತ್ತು ಕರುಣೆಯ ಗುಣಗಳನ್ನು ಅರಿತು ಬೆಳೆಸಿಕೊಳ್ಳಿ ಎಂದರು.


ಇನ್ನೋರ್ವ ಅತಿಥಿ ಕಡಬ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ್ ಕುಮಾರ್ ಮಾತನಾಡಿ, ವರಮಹಾಲಕ್ಷ್ಮಿ ವ್ರತವು ಕೇವಲ ಒಂದು ಧಾರ್ಮಿಕ ಆಚರಣೆಯಲ್ಲ. ಇದು ಕುಟುಂಬ, ಸಮಾಜ ಹಾಗೂ ರಾಷ್ಟ್ರದ ಸಮಗ್ರ ಕಲ್ಯಾಣಕ್ಕಾಗಿ ಒಗ್ಗಟ್ಟಿನ, ದಯೆಯ ಹಾಗೂ ಸನ್ಮಾರ್ಗದ ಮಾರ್ಗದರ್ಶಕವಾಗಿದೆ ಎಂದು ಹೇಳಿದರು.


ವೇದಿಕೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯ ಲೋಲಾಕ್ಷ, ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅಧ್ಯಕ್ಷ ಡಾ. ಸದಾನಂದ ಕುಂದರ್, ಕಾರ್ಯದರ್ಶಿ ಸುಧೀರ್ ಕುಮಾರ್, ಶ್ರೀ ಕ್ಷೇತ್ರ ಸುಬ್ರಹ್ಮಣ್ಯದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರವೀಣ ರೈ ಮರುವಂಜ, ಸೌಮ್ಯ ಭರತ್, ನೆಲ್ಯಾಡಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಮೋಹನ್ ಕುಮಾರ್ ಕಟ್ಟೆಮಜಲು ಉಪಸ್ಥಿತರಿದ್ದರು.

ಸನ್ಮಾನ :
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಸದಸ್ಯರಾದ ಪ್ರವೀಣ ರೈ ಮರುವಂಜ, ಸೌಮ್ಯ ಭರತ್, ಮಾಸ್ಟರ್ ಪ್ಲಾನ್ ಸದಸ್ಯ ಲೋಲಾಕ್ಷ, ಕಡಬ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುಧೀರ್ ಕುಮಾರ್, ನೆಲ್ಯಾಡಿ-ಕೌಕ್ರಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ. ಸದಾನಂದ ಕುಂದರ್, ಕಾರ್ಯದರ್ಶಿ ಸುಧೀರ್ ಕುಮಾರ್‌ರವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್, ಜಿ.ಪಂ.ಮಾಜಿ ಸದಸ್ಯರಾದ ಪಿ.ಪಿ.ವರ್ಗೀಸ್, ಸರ್ವೋತ್ತಮ ಗೌಡ, ಕಾಮಧೇನು ಮಹಿಳಾ ಸಹಕಾರ ಸಂಘದ ಕಾರ್ಯನಿರ್ವಣಾಧಿಕಾರಿ ಚೈತನ್ಯ ಹಾಗೂ ನಿರ್ದೇಶಕರು, ಸಂಘದ ಸದಸ್ಯರು ಉಪಸ್ಥಿತರಿದ್ದರು.

ಅಧ್ಯಕ್ಷತೆ ವಹಿಸಿದ್ದ ಪೂಜಾ ಸಮಿತಿ ಅಧ್ಯಕ್ಷೆ ಉಷಾ ಅಂಚನ್ ಸ್ವಾಗತಿಸಿದರು. ಸುಧೀರ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here