ಪುತ್ತೂರು: ವಿಜಯನಗರ ಜಿಲ್ಲೆ ಕೊಟ್ಟೂರುನಲ್ಲಿ ನಡೆದ ರಾಜ್ಯಮಟ್ಟದ ಖೋ- ಖೋ ತೀರ್ಪುಗಾರರ ಪರೀಕ್ಷೆಯಲ್ಲಿ ನರಿಮೊಗರು ಸಾಂದೀಪನಿ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಮಂಜುನಾಥ್ ಎ ಯು ಅವರು ಉತ್ತೀರ್ಣರಾಗಿರುತ್ತಾರೆ.
ಇವರು ಇತ್ತೀಚಿಗೆ ಚಿಕ್ಕಬಳ್ಳಾಪುರದಲ್ಲಿ ನಡೆದ ವಾಲಿಬಾಲ್ ತೀರ್ಪುಗಾರರ ಪರೀಕ್ಷೆಯಲ್ಲೂ ಉತ್ತೀರ್ಣರಾಗಿರುತ್ತಾರೆ. ಅದಲ್ಲದೆ ಇವರು ಲಗೋರಿ, ಕಬಡ್ಡಿ, ಅತ್ಲೆಟಿಕ್ಸ್ ಗಳಲ್ಲಿ ರಾಜ್ಯ ಹಾಗೂ ರಾಷ್ಟ್ರಮಟ್ಟದ ತೀರ್ಪುಗಾರರಾಗಿದ್ದಾರೆ. ಇವರು ಕಳೆದ ಹನ್ನೆರಡು ವರುಷ ರೋಟರಿ ಆಂಗ್ಲ ಮಾಧ್ಯಮ ವಿದ್ಯಾ ಸಂಸ್ಥೆಯಲ್ಲಿದ್ದು, ಪ್ರಸ್ತುತ ಸಾಂದೀಪನಿ ವಿದ್ಯಾಸಂಸ್ಥೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.