ರಾಮಕುಂಜ: ಸವಣೂರು ವಿದ್ಯಾಶ್ಮಿ ವಿದ್ಯಾಲಯದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ವಿಭಾಗದ ಚದುರಂಗ ಸ್ಪರ್ಧೆಯ ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ರಾಮಕುಂಜ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲಾ 10ನೇ ತರಗತಿ ವಿದ್ಯಾರ್ಥಿನಿ ಝಮೀರಾ ಚತುರ್ಥ ಸ್ಥಾನ ಪಡೆದುಕೊಂಡು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ ಮಾರ್ಗದರ್ಶನ ನೀಡಿದ್ದರು.