ರಾಮಕುಂಜ: ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ಆಶ್ರಯದಲ್ಲಿ ಕಬಡ್ಡಿ ಪಂದ್ಯಾಟ ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಗದ್ದೆಯಲ್ಲಿ ಇತ್ತೀಚೆಗೆ ನಡೆಯಿತು.

ಈ ಪಂದ್ಯಾಟದ ಬಾಲಕಿಯರ ವಿಭಾಗದಲ್ಲಿ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಹಾಗೂ ಬಾಲಕರ ವಿಭಾಗದಲ್ಲಿ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಬಾಲಕಿಯರ ವಿಭಾಗದಲ್ಲಿ ತಂಡದ ತನುಜಾ ಬೆಸ್ಟ್ ಆಲ್ ರೌಂಡರ್ ಹಾಗೂ ಬಾಲಕರ ವಿಭಾಗದಲ್ಲಿ ಸಮರ್ಥ್ ಬೆಸ್ಟ್ ಡಿಫೆಂಡರ್ ಪ್ರಶಸ್ತಿ ಪಡೆದುಕೊಂಡರು. ವಿದ್ಯಾರ್ಥಿಗಳಿಗೆ ಮಾಧವ ಬಿ.ಕೆ., ಜಸ್ವಂತ್ ಹಾಗೂ ಮಂಜುನಾಥ್ ತರಬೇತಿ ನೀಡಿದ್ದರು. ಮುಖ್ಯ ಶಿಕ್ಷಕ ಸತೀಶ್ ಭಟ್, ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ ಮಾರ್ಗದರ್ಶನ ನೀಡಿದ್ದರು.