ಕಾಣಿಯೂರು: ಬೆಳಂದೂರು ಗ್ರಾಮ ಪಂಚಾಯತ್ ಹಾಗೂ ಪ್ರಗತಿ ಸಂಜೀವಿನಿ ಬೆಳಂದೂರು ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ವತಿಯಿಂದ ಸ್ವಚ್ಛತೆ ಕಾರ್ಯಕ್ರಮವು ಆ 13ರಂದು ನಡೆಯಿತು.

ಗ್ರಾಮ ಪಂಚಾಯತ್ ಆವರಣ ಹಾಗೂ ಬಸ್ ಸ್ಟ್ಯಾಂಡ್, ರಸ್ತೆ ಬದಿಗಳಲ್ಲಿ ಸ್ವಚ್ಛತೆ ಮಾಡಲಾಯಿತು. ದಿನಸಿ ಹಾಗೂ ಇನ್ನಿತರ ಅಂಗಡಿಗಳ ಎದುರು ಸ್ವಚ್ಛತೆ ಆಯಾ ಅಂಗಡಿ ಮಾಲೀಕರೇ ಜವಾಬ್ದಾರಿ ಹಾಗೂ ಸ್ವ ಇಚ್ಛೆಯಿಂದ ಎಲ್ಲ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸ್ವಚ್ಛವಾಹಿನಿಗೆ ನೀಡಿ ಪರಿಸರ ಸಂರಕ್ಷಣೆಯಲ್ಲಿ ಪಾತ್ರರಾಗಬೇಕೆಂದು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ಒಕ್ಕೂಟದ ಅಧ್ಯಕ್ಷರು ಹಾಗೂ ತಾಲೂಕು ಸಂಪನ್ಮೂಲ ವ್ಯಕ್ತಿ ಪಂ.ರಾ ಸಂಸ್ಥೆ ತಾ.ಪಂ.ಕಡಬ ಇವರು ಜಾಗೃತಿ ಮೂಡಿಸಿದರು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳಂದೂರು ಇಲ್ಲಿನ 6 ಮತ್ತು 7ನೇ ತರಗತಿ ವಿದ್ಯಾರ್ಥಿಗಳಿಗೆ ಸ್ವಚ್ಛತೆ ಹಾಗೂ ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನದ ಮಾಹಿತಿಗಳನ್ನು ಗ್ರಾ. ಪಂ. ಅಧ್ಯಕ್ಷೆ ತೇಜಾಕ್ಷಿ ಕೊಡಂಗೆ ಅವರು ಮಾಹಿತಿ ನೀಡಿ, ಪ್ರತಿಜ್ಞೆ ಸ್ವೀಕರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ತೇಜಾಕ್ಷಿ ಕೊಡಂಗೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ್, ಹಾಗೂ ಸದಸ್ಯರು, ಸಿಬ್ಬಂದಿಗಳು ಹಾಗೂ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು, ಸದಸ್ಯರು ಹಾಗೂ ಸಿಬ್ಬಂದಿಗಳು, ಶಾಲಾ ಉಪಾಧ್ಯಾಯರು, ಅಂಗನವಾಡಿ ಕಾರ್ಯಕರ್ತೆ ಉಪಸ್ಥಿತರಿದ್ದರು.