ಕಿಲ್ಲೆ ಮೈದಾನದ ಮಂಗಲ್ ಪಾಂಡೆ ಚೌಕಿಯಲ್ಲಿ ಸ್ವಾತಂತ್ರ್ಯೋತ್ಸವ

0

ಪುತ್ತೂರು: ಪುತ್ತೂರು ತಾಲೂಕು ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಕಿಲ್ಲೆ ಮೈದಾನದ ಮಂಗಲ್ ಪಾಂಡೆ ಚೌಕಿಯಲ್ಲಿ ಸಂಭ್ರಮದಲ್ಲಿ ನಡೆಯಿತು.
ಸಹಾಯಕ ಕಮೀಷನರ್ ಸ್ಟೆಲ್ಲಾ ವರ್ಗಿಸ್ ಅವರು ಧ್ವಜಾರೋಹಣ ನೆರವೇರಿಸಿದರು. ಶಾಸಕ ಅಶೋಕ್ ರೈ, ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಅಮಳ ರಾಮಚಂದ್ರ, ತಹಶೀಲ್ದಾರ್ ಬಿ ಎಸ್ ಕೂಡಲಗಿ, ತಾ.ಪಂ ಕಾರ್ಯನಿರ್ವಹಕಾಧಿಕಾರಿ ನವೀನ್ ಭಂಡಾರಿ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಎನ್ ಸಿಸಿ, ನೇವಿ, ಪೊಲೀಸ್, ಗೃಹರಕ್ಷಕದಳ, ಅಗ್ನಿಶಾಮಕದಳ, ಸ್ಕೌಟ್, ಗೈಡ್ ಅವರಿಂದ ಪಥ ಸಂಚಲನ ನಡೆಯಿತು. ಬಳಿಕ ಪುರಭವನದಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here