ಪುತ್ತೂರು: ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು ಇಲ್ಲಿ ಭಾರತದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.
ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ವಿನಯ ಸುವರ್ಣ ಧ್ವಜಾರೋಹಣ ನೆರವೇರಿಸಿದರು. ನಿಕಟಪೂರ್ವ ಉಪಾಧ್ಯಕ್ಷರಾದ ರಾಮಚಂದ್ರ ಭಟ್, ಶಾಲಾ ಸುರಕ್ಷಾ ಸಮಿತಿ ಅಧ್ಯಕ್ಷರಾದ ಚೇತನ್ ಕುಮಾರ್, ನಿಯೋಜಿತ ಮುಖ್ಯ ಶಿಕ್ಷಕಿ ಭಗಿನಿ ಐರಿನ್ ವೇಗಸ್ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಉಪಸ್ಥಿತರಿದ್ದರು. ಶಿಕ್ಷಕಿ ದಿವ್ಯ ವಂದಿಸಿ, ಸಾತ್ವಿಕ ಕಾರ್ಯಕ್ರಮ ನಿರೂಪಿಸಿದರು.