ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ

0


ಪುತ್ತೂರು: ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವವು ಶಾಲಾ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿಯವರು ಧ್ವಜಾರೋಹಣ ನೆರವೇರಿಸುವ ಮೂಲಕ ನಡೆಯಿತು.

ಪೂರ್ವಜರತ್ಯಾಗ ಬಲಿದಾನದಿಂದಾಗಿ ನಾವಿಂದು ನಿರ್ಭಯವಾಗಿ, ಸ್ವಾತಂತ್ರ್ಯವಾಗಿಜೀವನ ನಡೆಸುತ್ತಿದ್ದೇವೆ. ಹಿರಿಯರ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ತಿಳಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ಸಾರಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಬಿರುಮಲೆ ಬೆಟ್ಟ ಅಭಿವೃದ್ಧಿ ಸಮಿತಿಯ ಅಧ್ಯಕ್ಷರು ಹಾಗೂ ಪುತ್ತೂರು ರೋಟರಿ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿಯೂ ಆದ ಜೀವನ್‌ದಾಸ್‌ ರೈ ಚಿಲ್ಮೆತ್ತಾರು, ದೇಶ ಹಾಗೂ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದ ವೀರರನ್ನು ಸ್ಮರಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಖ್ಯಾತ ಉದ್ಯಮಿಗಳಾದ ಶಿಲ್ಪಾ ಹರಿಪ್ರಸಾದ್‌ರೈ ತಿಂಗಳಾಡಿ, ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಆನಂದ ಸಿ, ಹಿರಿಯ ವಿದ್ಯಾರ್ಥಿ ಕ್ಷಿತಿಜ್‌ ಎಚ್‌.ಎಸ್, ಶಿಕ್ಷಕ – ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ದ್ವಜಾರೋಹಣ ನಡೆಸಿ ಗೌರವ ವಂದನೆ ಸಲ್ಲಿಸಿದ ನಂತರ ಮುಖ್ಯಅತಿಥಿಯಾದ ಶಿಲ್ಪಾ ಹರಿಪ್ರಸಾದ್‌ ರೈಯವರು ಸಿಹಿತಿಂಡಿಯನ್ನು ವಿತರಿಸಲಾಯಿತು. ಮುಖ್ಯೋಪಾಧ್ಯಾಯಿನಿ ಗಾಯತ್ರಿಎಸ್‌ರವರ ಸ್ವಾಗತಿಸಿದರು.ಈ ಕಾರ್ಯಕ್ರಮವನ್ನು ಶಿಕ್ಷಕಿ ಸಂಧ್ಯಾ ಕೆ ರವರು ನಿರೂಪಿಸಿ, ಧನ್ಯವಾದವಿತ್ತರು. ಬಳಿಕ ಸ್ವಾತಂತ್ರ್ಯೋತ್ಸವದ ಕುರಿತಾದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here