ರಾಮಕುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಗೋಕುಲನಗರ, ಕೊಯಿಲ-ರಾಮಕುಂಜ ಇದರ ಆಶ್ರಯದಲ್ಲಿ 43ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉತ್ಸವ ಆ.17ರಂದು ಕೊಯಿಲ-ಗೋಕುಲನಗರದಲ್ಲಿ ನಡೆಯಲಿದೆ.
ಬೆಳಿಗ್ಗೆ 9ಕ್ಕೆ ಅಷ್ಟಮಿ ಕಟ್ಟೆಯಲ್ಲಿ ದೀಪೋಜ್ವಲನೆ ನಡೆಯಲಿದೆ. 9.30ರಿಂದ ಸಾರ್ವಜನಿಕ ಸ್ಪರ್ಧೆಗಳು ನಡೆಯಲಿದೆ. ಮಧ್ಯಾಹ್ನ ಪಿ.ಗೋವಿಂದ ಭಟ್ಟ ಪೂರಿಂಗ ಇವರ ಸ್ಮರಣಾರ್ಥ ಪುರುಷರಿಗೆ ಮುಕ್ತ ಕಬಡ್ಡಿ ಪಂದ್ಯಾಟ ನಡೆಯಲಿದೆ. ಮಧ್ಯಾಹ್ನ 1 ಗಂಟೆಗೆ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 3.30ರ ನಂತರ ಕೃಷ್ಣವೇಷ ಸ್ಪರ್ಧೆ ನಡೆಯಲಿದೆ.
ಸಂಜೆ 5.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು ಕೊಯಿಲ ಜಾನುವಾರು ಸಂವರ್ದನ ಮತ್ತು ತರಬೇತಿ ಕೇಂದ್ರದ ಪ್ರಭಾರ ಉಪನಿರ್ದೇಶಕರಾದ ಡಾ.ಪ್ರಸನ್ನ ಹೆಬ್ಬಾರ್ ಧಾರ್ಮಿಕ ಪ್ರವಚನ ನೀಡಲಿದ್ದಾರೆ. ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಅಧ್ಯಕ್ಷ ಮೋಹನ್ದಾಸ್ ಶೆಟ್ಟಿ ಬಡಿಲ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಕೊಯಿಲ ಗ್ರಾ.ಪಂ.ಅಧ್ಯಕ್ಷೆ ಪುಷ್ಪಾಸುಭಾಶ್ ಶೆಟ್ಟಿ ಅರುವಾರ ಬಾಳಿಕೆ, ರಾಮಕುಂಜ ಗ್ರಾ.ಪಂ.ಅಧ್ಯಕ್ಷೆ ಬಿ.ಸುಚೇತಾ ಬರೆಂಬೆಟ್ಟು ಭಾಗವಹಿಸಲಿದ್ದಾರೆ. ಸಂಜೆ 7ರಿಂದ ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಸಮಿತಿ ಪ್ರಕಟಣೆ ತಿಳಿಸಿದೆ.