ಪುತ್ತೂರು: ಶ್ರೀ ಕೃಷ್ಣ ಯುವಕ ಮಂಡಲ ಕುಂಟ್ಯಾನ, ಸೇಡಿಯಾಪು – ಬನ್ನೂರು ಇದರ ವತಿಯಿಂದ ಆ.17ರಂದು ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನದ ವಠಾರದಲ್ಲಿ 21ನೇ ವರ್ಷದ ಮೊಸರು ಕುಡಿಕೆ ಉತ್ಸವ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮ ಉದ್ಘಾಟನೆ ನೆರವೇರಲಿದ್ದು, ಶ್ರೀ ಸದಾಶಿವ ದೇವಸ್ಥಾನ ಕುಂಟ್ಯಾನ ಇದರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಧರ್ಣಪ್ಪ ಮೂಲ್ಯ ಕಜೆ ಉದ್ಘಾಟಿಸಲಿರುವರು.
9.30ರಿಂದ ಆಟೋಟ ಸ್ಪರ್ಧೆಗಳು ನಡೆಯಲಿದ್ದು, ಮಧ್ಯಾಹ್ನ 1.೦೦ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಧರ್ಣಪ್ಪ ಮೂಲ್ಯ ಕಜೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ್ ಭಟ್, ಪಿ.ಎಲ್.ಡಿ. ಬ್ಯಾಂಕ್ ನಿರ್ದೇಶಕ ರಾಜಶೇಖರ್ ಜೈನ್ ನೀರ್ಪಾಜೆ, ಎ. ಮನೋಹರ ಆರುವಾರಗುತ್ತು, ಬನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸ್ಮಿತಾ, ಉಪಾಧ್ಯಕ್ಷ ಶೀನಪ್ಪ ಕುಲಾಲ್ ಬದಿಯಡ್ಕ ಇವರುಗಳು ಭಾಗವಹಿಸಲಿದ್ದಾರೆ. ಮೊಸರು ಕುಡಿಕೆ ಸಮಾರಂಭದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಬಹುಮಾನ ವಿತರಣೆ ಕಾರ್ಯವು ನಡೆಯಲಿದೆ ಎಂದು ಶ್ರೀಕೃಷ್ಣ ಯುವಕ ಮಂಡಲ ಇದರ ಅಧ್ಯಕ್ಷ ಎಲ್.ಎನ್.ಟಿ ಲ್ಯಾಡರ್ ಮಾಲೀಕ ತಿಲಕ್, ಕಾರ್ಯದರ್ಶಿ ಎಂ.ಕೆ ಸುಬ್ರಹ್ಮಣಿ ಅಡೆಂಚಿಲಡ್ಕ, ಗೌರವ ಸಲಹೆಗಾರ ಸುಬ್ರಹ್ಮಣ್ಯ ದಾಸ್ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.