ಕಾವು :ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಾವು ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕ್ರೀಡಾಕೂಟ ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಠಾರದಲ್ಲಿ ಆ 15 ರಂದು ನಡೆಯಿತು.
ಉದ್ಘಾಟನಾ ಕಾರ್ಯಕ್ರಮ
ಕ್ರೀಡಾಕೂಟವನ್ನು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ನನ್ಯ ಅಚ್ಚುತ ಮೂಡೆತ್ತಾಯ ದೀಪ ಪ್ರಜ್ವಲಿಸಿ ಉದ್ಘಾಟಿಸಿ ಶುಭ ಹಾರೈಸಿದರು.ಸಮಿತಿಯ ಅಧ್ಯಕ್ಷರಾದ ನವೀನ್ ನನ್ಯ ಪಟ್ಟಾಜೆ ಅಧ್ಯಕ್ಷತೆ ವಹಿಸಿದ್ದರು.ಸಮಿತಿಯ ಗೌರವ ಸಲಹೆಗಾರರಾದ ಚಂದ್ರಶೇಖರ ರಾವ್ ನಿಧಿಮುಂಡ, ಕೋಶಾಧಿಕಾರಿ ಕೃಷ್ಣ ಪ್ರಸಾದ್ ಕೊಚ್ಚಿ, ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಕಾವು,ಜೊತೆ ಕಾರ್ಯದರ್ಶಿ ವಿಶ್ವನಾಥ ಕೆರೆಮಾರು ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಅಧ್ಯಕ್ಷರಾದ ನವೀನ್ ನನ್ಯ ಪಟ್ಟಾಜೆ ಸ್ವಾಗತಿಸಿ, ಸದಸ್ಯರಾದ ಯೋಗೀಶ್ ಹೊಸಮನೆ ಕಾವು ವಂದಿಸಿದರು, ದಿವ್ಯಪ್ರಸಾದ್ ಎ ಎಂ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದ ಬಳಿಕ ಪುರುಷರಿಗೆ, ಮಹಿಳೆಯರಿಗೆ,ಮಕ್ಕಳಿಗೆ ವಿವಿಧ ಕ್ರೀಡಾಕೂಟ ನಡೆಯಿತು.

ಮುದ್ದು ರಾಧ- ಮುದ್ದು ಕೃಷ್ಣ ವೇಷ ಸ್ಪರ್ಧೆ
ಪುಟಾಣಿ ಮಕ್ಕಳಿಗೆ ಗೆಳೆಯರ ಬಳಗ ಕಾವು ಇವರ ಪ್ರಾಯೋಜಕತ್ವದಲ್ಲಿ ಮುದ್ದು ರಾಧ-ಮುದ್ದು ಕೃಷ್ಣ ವೇಷ ಸ್ಪರ್ಧೆ ನಡೆಯಿತು,ಗೆಳೆಯರ ಬಳಗದ ನಾರಾಯಣ ಆಚಾರ್ಯ ಮಳಿ,ಮತ್ತು ಸದಸ್ಯರು ಕಾರ್ಯಕ್ರಮ ನಿರ್ವಹಿಸಿದರು.
ಸಮಾರೋಪ ಕಾರ್ಯಕ್ರಮ, ಬಹುಮಾನ ವಿತರಣೆ
ಸಂಜೆ ನಡೆದ ಸಮಾರೋಪ ಕಾರ್ಯಕ್ರಮದಲ್ಲಿ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು.ಸಮಿತಿಯ ಅಧ್ಯಕ್ಷರಾದ ನವೀನ್ ನನ್ಯ ಪಟ್ಟಾಜೆ, ಗೌರವ ಸಲಹೆಗಾರರಾದ ಲೋಕೇಶ್ ಚಾಕೋಟೆ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯರಾದ ಭಾಸ್ಕರ ಬಲ್ಯಾಯ ಕಾವು, ಸದಸ್ಯರಾದ ಸುಂದರ ಪೂಜಾರಿ ಕೆರೆಮಾರು,ನಾರಾಯಣ ಆಚಾರ್ಯ ಮಳಿ,ಶಾಂತ ಜೆ ರೈ,ಸೌಮ್ಯ ಬಾಲಸುಬ್ರಮಣ್ಯ ಮುಂಡಕೊಚ್ಚಿ ಬಹುಮಾನ ವಿತರಿಸಿದರು,ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಕಾವು, ಸದಸ್ಯರಾದ ಯೋಗಿಶ್ ಹೊಸಮನೆ ಬಹುಮಾನ ಪಟ್ಟಿ ವಾಚಿಸಿದರು. ಸಮಿತಿ ಸದಸ್ಯರು ಸಹಕರಿಸಿದರು.