
ಕಡಬ: ಅಡೆಂಜ ಸ.ಕಿ.ಪ್ರಾ.ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ದುರ್ಗಾಪ್ರಸಾದ್ ಕೆ.ಪಿ ಧ್ವಜಾರೋಹಣ ನೆರವೇರಿಸಿದರು. ಅತಿಥಿಯಾಗಿ ನೂಜಿಬಾಳ್ತಿಲ ಗ್ರಾ.ಪಂ ಉಪಾಧ್ಯಕ್ಷ ಚಂದ್ರಶೇಖರ ಹಳೆನೂಜಿ, ಸದಸ್ಯೆ ವಿನಯ ಬಳಕ್ಕ ಉಪಸ್ಥಿತರಿದ್ದರು. ಎಸ್‌ಡಿಎಂಸಿ ಪದಾಧಿಕಾರಿಗಳು, ಪೋಷಕರು, ಹಿರಿಯ ವಿದ್ಯಾರ್ಥಿಗಳು, ವಿದ್ಯಾಭಿಮಾನಿಗಳು, ಶಿಕ್ಷಕ ವೃಂದದವರು ಭಾಗವಹಿಸಿದ್ದರು.