ಪುತ್ತೂರು:ಆನಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.
ಕಾರ್ಯಕ್ರಮವನ್ನು ಎಸ್ಡಿಎಂಸಿ ಅಧ್ಯಕ್ಷ ಹರೀಶ್ ರವರು ಧ್ವಜಾರೋಹಣಗೈದು, ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ನರಿಮೊಗರು ಗ್ರಾಮ ಪಂಚಾಯತ್ ಸದಸ್ಯ ದಿನೇಶ್ ಮಜಲು, ಸುಧಾಕರ ಕುಲಾಲ್, ತಾರಾನಾಥ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ಕುಮಾರ್ ಮಜಲು, ನರಿಮೊಗರು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನವೀನ್, ನವಶಕ್ತಿ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ವಿಶ್ವನಾಥ ಬಲ್ಯಾಯ, ಹಿರಿಯರೂ, ದಾನಿಗಳೂ ಆದ ಬಾಲಕೃಷ್ಣ ನಾಯಕ್ ಮಜಲು, ಉದ್ಯಮಿ ಬಿಕೆ ಶ್ರೀನಿವಾಸರಾವ್, ಶಾಲಾ ಮುಖ್ಯ ಗುರು ಫೆಲ್ಸಿಟಾ ಡಿ ಕುನ್ಹಾ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಭಾಷಣ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು. ಶಿಕ್ಷಕಿ ವಿಶಾಲಾಕ್ಷಿ ಸ್ವಾತಂತ್ರ್ಯ ದಿನದ ಮಹತ್ವದ ಕುರಿತು ಮಾತನಾಡಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಎಸ್ಡಿಎಂಸಿ ಉಪಾಧ್ಯಕ್ಷೆ ಸುಜಾತ ,ಸದಸ್ಯರುಗಳು, ಹಿರಿಯ ವಿದ್ಯಾರ್ಥಿಗಳು ,ಪೋಷಕರು, ವಿದ್ಯಾಭಿಮಾನಿಗಳು, ಅನೇಕ ಸಂಘ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ,ಸದಸ್ಯರಗಳು, ವಿದ್ಯಾರ್ಥಿಗಳು, ಅಕ್ಷರ ದಾಸೋಹ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಗುರು ಸ್ವಾಗತಿಸಿ, ಶಿಕ್ಷಕಿ ಮಾಲತಿಯವರು ವಂದಿಸಿದರು. ಜಿಪಿಟಿ ಶಿಕ್ಷಕ ಸುನಿಲ್ ಕಾರ್ಯಕ್ರಮ ನಿರೂಪಿಸಿದರು. ಗೌರವ ಶಿಕ್ಷಕಿ ಸೌಮ್ಯ, ಪೂರ್ಣಿಮಾ,
ನೀತಾ ಸಹಕರಿಸಿದರು.