ಹಿರೇಬಂಡಾಡಿ: ಇಲ್ಲಿನ ಸರಕಾರಿ ಉನ್ನತ ಹಿ.ಪ್ರಾ.ಶಾಲೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸೋಮೇಶ್ ಕೇಪುಳು ಧ್ವಜಾರೋಹಣ ನೆರವೇರಿಸಿದರು.
ಹಿರೇಬಂಡಾಡಿ ಗ್ರಾ.ಪಂ.ಸದಸ್ಯರಾದ ಹಮ್ಮಬ್ಬ ಶೌಕತ್ ಆಲಿ, ಲಕ್ಷ್ಮೀಶ ನಿಡ್ಡೆಂಕಿ, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಮಕ್ಕಳ ಪೋಷಕರು, ವಿದ್ಯಾಭಿಮಾನಿಗಳು, ಶಿಕ್ಷಕರು, ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು. ಪ್ರಭಾರ ಮುಖ್ಯಗುರು ಕೃಷ್ಣಮೂರ್ತಿ ಅವರು ಸ್ವಾತಂತ್ರ್ಯ ದಿನಾಚರಣೆ ಕುರಿತು ಮಾತನಾಡಿದರು. ಹಿರಿಯ ಶಿಕ್ಷಕಿ ವಾರಿಜ ಸ್ವಾಗತಿಸಿದರು. ಶಿಕ್ಷಕಿ ಪ್ರಜ್ಯೋತಿ ವಂದಿಸಿದರು. ಶಿಕ್ಷಕಿ ರಾಧಿಕಾ ನಿರೂಪಿಸಿದರು.