ಪುತ್ತೂರು: ರೋಟರಿ ಕ್ಲಬ್ ಉಪ್ಪಿನಂಗಡಿ ವತಿಯಿಂದ ಉಪ್ಪಿನಂಗಡಿ ರೋಟರಿ ಸಮುದಾಯ ಭವನದಲ್ಲಿ 79ನೇ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು.
ಉದ್ಯಮಿ ಯು.ರಾಮ ಉಪ್ಪಿನಂಗಡಿರವರು ಧ್ವಜಾರೋಹಣವನ್ನು ನೆರವೇರಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಯಾಗಿ ರೋಟರಿ ಅಸಿಸ್ಟೆಂಟ್ ಗವರ್ನರ್ ಡಾ.ರಾಜಾರಾಮ್ ಕೆ.ಬಿ, ರೋಟರಿ ಕ್ಲಬ್ ಉಪ್ಪಿನಂಗಡಿ ಅಧ್ಯಕ್ಷ ಜೋನ್ ಕೆನ್ಯೂಟ್ ಮಸ್ಕರೇನ್ಹಸ್, ಕಾರ್ಯದರ್ಶಿ ಶ್ರೀಕಾಂತ್ ಪಟೇಲ್, ಕಾರ್ಯಕ್ರಮ ಉಸ್ತುವಾರಿ ಆರ್.ರಾಜೇಶ್ ಸಹಿತ ರೋಟರಿ ಸದಸ್ಯರು ಉಪಸ್ಥಿತರಿದ್ದರು.