ಪುಣಚ: ಪುಣಚ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಆ.17ರಂದು ಬೆಳಿಗ್ಗೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.

ಬೆಳಿಗ್ಗೆ ದೇವಸ್ಥಾನದ ಪ್ರಧಾನ ಅರ್ಚಕ ಕೃಷ್ಣ ಬನ್ನಿಂತಾಯರು ಮಹಾಗಣಪತಿ ಹೋಮ ನೆರವೇರಿಸಿದರು. ಬಳಿಕ ಬ್ರಹ್ಮಶ್ರೀ ವರ್ಕಾಡಿ ಗಣೇಶ ತಂತ್ರಿಗಳ ನೇತೃತ್ವದಲ್ಲಿ ಪುಣಚ ನಾರಾಯಣ ಬನ್ನಿಂತಾಯರ ಪೌರೋಹಿತ್ಯದಲ್ಲಿ ಪವಿತ್ರಪಾಣಿ ಪಾಲಸ್ತಡ್ಕ ಜಯರಾಮ ಶಿವತ್ತಾಯರು ಶ್ರೀ ಸತ್ಯನಾರಾಯಣ ಪೂಜೆ ನೆರವೇರಿಸಿದರು. ಮಧ್ಯಾಹ್ನ ಮಹಾಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು. ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಮಾರಪ್ಪ ಶೆಟ್ಟಿ ಬೈಲುಗುತ್ತು, ಗೌರವಾಧ್ಯಕ್ಷ ಎಸ್.ಆರ್.ರಂಗಮೂರ್ತಿ, ಪ್ರಧಾನ ಕಾರ್ಯದರ್ಶಿ ಉದಯ ಕುಮಾರ್ ದಂಬೆ, ಉಪಾಧ್ಯಕ್ಷ ಜಯಂತ ಗೌಡ ಒ, ಸಂಚಾಲಕ ಶ್ರೀಧರ ಶೆಟ್ಟಿ ದೇವರಗುಂಡಿ, ಕೋಶಾಧಿಕಾರಿ ಹರ್ಷ ಶಿಬರೂರಾಯ ಏರಣಿಕಟ್ಟೆ, ಜೊತೆ ಕಾರ್ಯದರ್ಶಿ ರಾಮಕೃಷ್ಣ ಮೂಡಂಬೈಲು, ಸಮಿತಿ ಸದಸ್ಯರುಗಳು, ಗ್ರಾಮಸ್ಥರು, ಊರ ಪರಊರ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.

ಯಕ್ಷಗಾನ ತಾಳಮದ್ದಳೆ: ಅಪರಾಹ್ನ ಶ್ರೀದುರ್ಗಾ ಉಳ್ಳಾಲ್ತಿ ಮಲರಾಯ ಯಕ್ಷಕಲಾ ಸಂಘ ಬೊಳುವಾರು ಪುತ್ತೂರು ಇವರಿಂದ ‘ಶಾಂಭವಿ ವಿಜಯ’ ಎಂಬ ಯಕ್ಷಗಾನ ತಾಳಮದ್ದಳೆ ಕೂಟ ನಡೆಯಿತು.