





ನಿಡ್ಪಳ್ಳಿ: ನಿಡ್ಪಳ್ಳಿ ಗ್ರಾಮ ಪಂಚಾಯತ್ ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ ನಿಡ್ಪಳ್ಳಿ ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ಆ.19ರಂದು ಪಂಚಾಯತ್ ಅಧ್ಯಕ್ಷ ವೆಂಕಟ್ರಮಣ ಬೋರ್ಕರ್ ಬಿ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.


ಪುತ್ತೂರು ಸಾಮಾಜಿಕ ಅರಣ್ಯ ಇಲಾಖೆಯ ವಲಯ ಅರಣ್ಯಾಧಿಕಾರಿ ವಿದ್ಯಾರಾಣಿ ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಿದ್ದರು. ಪಂಚಾಯತ್ ಸದಸ್ಯರಾದ ಅವಿನಾಶ್ ರೈ, ಸತೀಶ್ ಶೆಟ್ಟಿ, ಬಾಲಚಂದ್ರ ನಾಯ್ಕ, ನಂದಿನಿ ಆರ್.ರೈ, ತುಳಸಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.





ಕಾರ್ಯದರ್ಶಿ ಶಿವರಾಮ ಮೂಲ್ಯ ಸ್ವಾಗತಿಸಿ ಪಿಡಿಒ ವರದಿ ವಾಚಿಸಿದರು. ಸಿಬ್ಬಂದಿ ಸಂಶೀನಾ ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆ ವಾಚಿಸಿದರು. ಸಿಬ್ಬಂದಿ ಜಯ ಕುಮಾರಿ ವಂದಿಸಿದರು. ಸಿಬ್ಬಂದಿಗಳಾದ ರೇವತಿ, ವಿನೀತ್ ಕುಮಾರ್, ಗ್ರಂಥ ಪಾಲಕಿ ಪವಿತ್ರ, ಪಶು ಸಖಿ ತೇಜಸ್ವಿನಿ ಸಹಕರಿಸಿದರು. ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು, ಸ್ವಚ್ಚತಾ ಘಟಕ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಪಾಲ್ಗೊಂಡರು.









