ಪುತ್ತೂರು: ಪಾಣಾಜೆ ಗ್ರಾಮ ಪಂಚಾಯತ್ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆ ಆ.21ರಂದು ಬೆಳಿಗ್ಗೆ 10.30ರಿಂದ ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಭಾಭವನದಲ್ಲಿ ನಡೆಯಲಿದೆ. ಗ್ರಾಮ ಪಂಚಾಯತ್ ಅಧ್ಯಕ್ಷೆ ಮೈಮೂನತ್ತುಲ್ ಮೆಹ್ರಾ ಅಧ್ಯಕ್ಷತೆ ವಹಿಸಲಿದ್ದಾರೆ. ಮಾರ್ಗದರ್ಶಿ ಅಧಿಕಾರಿಯಾಗಿ ಪುತ್ತೂರು ಪಶಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ|ಧರ್ಮಪಾಲ್ ಕೆ. ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.