ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕಡಬ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ಇವುಗಳ ಆಶ್ರಯದಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗಾಗಿ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವು ಆ.20ರಂದು ಕುಂತೂರು ಪದವು ಸಂತ ಜಾರ್ಜ್ ಪ್ರೌಢಶಾಲೆಯಲ್ಲಿ ನಡೆಯಿತು.

ಕಡಬ ತಾಲೂಕು ಜನಜಾಗೃತಿ ಅಧ್ಯಕ್ಷ ಮಹೇಶ್ ಕೆ ಸವಣೂರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನವನ್ನು ಯಾವುದೇ ದುಶ್ಟಟಕ್ಕೆ ಬಲಿಯಾಗದೇ ವ್ಯಾಸಂಗಕ್ಕೆ ಹೆಚ್ಚಿನ ಮಹತ್ವನ್ನು ನೀಡಿ ಜೀವನದಲ್ಲಿ ಪಾಸಾಗಬೇಕು. ಆಗ ಮಾತ್ರ ನಿಮ್ಮ ತಂದೆ ತಾಯಿ, ಶಿಕ್ಷಕರು ಇಟ್ಟ ನಂಬಿಕೆಯನ್ನು ಉಳಿಸಲು ಸಾಧ್ಯವಿದೆ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಸಂತ ಜಾರ್ಜ್ ಪ್ರೌಢಶಾಲೆಯ ಮುಖ್ಯ ಗುರು ಹರಿಶ್ಚಂದ್ರ ಕೆ ಮಾತನಾಡಿ, ವಿದ್ಯಾರ್ಥಿಗಳು ಮಾದಕ ವ್ಯಸನದಿಂದ ದೂರವಿದ್ದು, ನೆಮ್ಮದಿಯ ಜೀವನವನ್ನು ನಡೆಸಬೇಕು. ಆಗ ಮಾತ್ರ ನಮ್ಮ ಜೀವನಕ್ಕೆ ಅರ್ಥ ಸಿಗುತ್ತದೆ ಎಂದರು. ಸಂಪನ್ಮೂಲ ವ್ಯಕ್ತಿ ಪೆರಾಬೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಜೆ ಸಿ ಐ ನ ವಲಯ ತರಬೇತುದಾರೆ ಹೇಮಲತಾ ಪ್ರದೀಪ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ವಿದ್ಯಾವರ್ಜನೆ ಸಮಯದಲ್ಲಿ ಶಿಕ್ಷಣಕ್ಕೆ ಒತ್ತು ನೀಡುವುದಲ್ಲದೇ ಮಾದಕ ವ್ಯಸನ, ಗುಟ್ಕಾ ಇನ್ನಿತರ ದುಶ್ಟಟಕ್ಕೆ ದೂರವಿದ್ದು, ಬದುಕನ್ನು ಉಜ್ವಲಗೊಳಿಸಬೇಕು. ಮಾನಸಿಕವಾಗಿ ದೈರ್ಯಗೆಡದೇ ಬದುಕಿನಲ್ಲಿ ಬರುವ ಸವಾಲುಗಳನ್ನು ದಿಟ್ಟವಾಗಿ ಎದುರಿಸಬೇಕು ಎಂದರು.
ವೇದಿಕೆಯಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಆಲಂಕಾರು ವಲಯದ ಸದಸ್ಯ ಬಾಬು ಕೆ ಎಸ್, ಪದವು ಪ್ರಗತಿಬಂಧು ಸ್ವಸಹಾಯ ಸಂಘದ ಒಕ್ಕೂಟದ ಅಧ್ಯಕ್ಷ ನೀಲಯ್ಯ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ತ್ರೇಸಿಯಮ್ಮ ಸ್ವಾಗತಿಸಿದರು. ಆಲಂಕಾರು ವಲಯದ ವಲಯ ಮೇಲ್ಷಿಚಾರಕಿ ಸುಜಾತ ಬಿ ಕಾರ್ಯಕ್ರಮ ನಿರೂಪಿಸಿ, ಸವಿತಾ ವಂದಿಸಿದರು. ಗೀತಾ ಕೆ ಸಹಕರಿಸಿದರು.