ಪುತ್ತೂರು: ತಾಲ್ಲೂಕು ಬಂಟರ ಸಂಘದ ವತಿಯಿಂದ ಆ. 17 ರಂದು ಕೈಕಾರದಲ್ಲಿ ಜರಗಿದ ಬಂಟೆರೆ ಕೆಸರ್ ಡ್ ಒಂಜಿ ಕುಸಲ್ ಕಾರ್ಯಕ್ರಮದಂದು ಆರ್ ಬಿಐ ಮಾಜಿ ನಿರ್ದೇಶಕ “ಸಹಕಾರರತ್ನ” ಅಗರಿ ನವೀನ್ ಭಂಡಾರಿ ಯವರನ್ನು ಸನ್ಮಾನಿಸಿ, ಗೌರವಿಸಲಾಯಿತು.
ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಬಂಟರ ಯಾನೆ ನಾಡವರ ಮಾತೃ ಸಂಘದ ಪುತ್ತೂರು ತಾಲೂಕು ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ಸಹ ಸಂಚಾಲಕ ಸಾಜ ರಾಧಾಕೃಷ್ಣ ಆಳ್ವ, ತಾಲೂಕು ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಮಾಜಿ ಅಧ್ಯಕ್ಷರುಗಳಾದ ಬೂಡಿಯಾರ್ ರಾಧಾಕೃಷ್ಣ ರೈ, ಅರಿಯಡ್ಕ ಲಕ್ಷ್ಮಿನಾರಾಯಣ ಶೆಟ್ಟಿ, ತಾಲೂಕು ಮಹಿಳಾ ಬಂಟರ ವಿಭಾಗದ ಅಧ್ಯಕ್ಷೆ ಗೀತಾ ಮೋಹನ್ ರೈ, ಉದ್ಯಮಿಗಳಾದ ಶಿವಪ್ರಸಾದ್ ಶೆಟ್ಟಿ ಕಿನಾರ, ಸೀತಾರಾಮ ರೈ ಕೆದಂಬಾಡಿಗುತ್ತು, ಪ್ರಸನ್ನ ಶೆಟ್ಟಿ ಸಿಝ್ಲರ್, ತಾಲೂಕು ಯುವ ಬಂಟರ ವಿಭಾಗದ ಅಧ್ಯಕ್ಷ ಹರ್ಷಕುಮಾರ್ ರೈ, ತಾಲೂಕು ಬಂಟರ ಸಂಘದ ನಿರ್ದೇಶಕ ಶಶಿರಾಜ್ ರೈ ,ತಾಲೂಕು ಬಂಟರ ಸಂಘದ ಪ್ರಧಾನ ಕಾರ್‍ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ, ಕೋಶಾಧಿಕಾರಿ ಸಂತೋಷ್ ಶೆಟ್ಟಿ ಸಾಜ, ನಿರ್ದೇಶಕರುಗಳಾದ ರವಿಪ್ರಸಾಧ್ ಶೆಟ್ಟಿ ಬನ್ನೂರು, ಶಶಿಕಿರಣ್ ರೈ ನೂಜಿಬೈಲು, ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ, ಬಂಟರ ಯಾನೆ ನಾಡವರ ಮಾತೃ ಸಂಘದ ನಿರ್ದೇಶಕಿ ವಾಣಿ ಶೆಟ್ಟಿ ನೆಲ್ಯಾಡಿ, ಮಹಿಳಾ ಬಂಟರ ವಿಭಾಗದ ಕಾರ್ಯದರ್ಶಿ ಕುಸುಮ ಪಿ.ಶೆಟ್ಟಿ, ಬಂಟರ ಸಂಘದ ಕಚೇರಿ ವ್ಯವಸ್ಥಾಪಕಿ ರಂಜಿನಿ ಶೆಟ್ಟಿ, “ಬಂಟೆರೆ ಕೆಸರ್‌ಡ್ ಒಂಜಿ ಕುಸಲ್” ಕಾರ್‍ಯಕ್ರಮದ ಸಂಚಾಲಕ ದಯಾನಂದ ರೈ ಕೋರ್ಮಂಡ, ಅಧ್ಯಕ್ಷ ಸೀತಾರಾಮ ಶೆಟ್ಟಿ ಕೈಕಾರ, ಕಾರ್‍ಯದರ್ಶಿ ಪ್ರಜ್ವಲ್ ರೈ ತೊಟ್ಲ, ಗಿರೀಶ್ ರೈ ಮೂಲೆ,ಮನ್ಮಥ ಶೆಟ್ಟಿ, ತಿಲಕ್ ರೈ ಕುತ್ಯಾಡಿ ರವರುಗಳು ಉಪಸ್ಥಿತರಿದ್ದರು