ಪುಣಚ: ಪುಣಚ ಪ್ರಾಥಮಿಕ ವ್ಯವಸಾಯ ಸೇವಾ ಸಹಕಾರ ಸಂಘದ 2024-25ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯು ಆ.24ರಂದು ಬೆಳಿಗ್ಗೆ 10:30ಕ್ಕೆ ಸಂಘದ ಅಧ್ಯಕ್ಷರಾದ ಜನಾರ್ದನ ಭಟ್ ಅಮೈ ಅವರ ಅಧ್ಯಕ್ಷತೆಯಲ್ಲಿ ಪುಣಚ ಮಹಿಷಮರ್ದಿನಿ ದೇವಸ್ಥಾನದ ಬಳಿ ಇರುವ ಶ್ರೀದೇವಿ ಭವನದಲ್ಲಿ ನಡೆಯಲಿದೆ. ಸಂಘದ ಸದಸ್ಯರೆಲ್ಲರೂ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಯ ಪೂಜಾರಿ ಬಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.