ವಗ್ಗ ಕಾವಳಪಡೂರು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ

0

ಪುತ್ತೂರು : ಸರಕಾರಿ ಪದವಿ ಪೂರ್ವ ಕಾಲೇಜು ಕಾವಳಪಡೂರು ವಗ್ಗ ಇಲ್ಲಿನ ಪ್ರೌಢಶಾಲಾ ವಿಭಾಗದಲ್ಲಿ ವಿಜ್ಞಾನ ಕ್ಲಬ್ ನ ಅಂಗವಾಗಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಆ.23ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಬಾಹ್ಯಾಕಾಶ ಕುರಿತು ವೀಡಿಯೋ ತೋರಿಸುವ ಮೂಲಕ ಮಾಹಿತಿಯನ್ನು ನೀಡಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ವಿಜ್ಞಾನ ಕ್ಲಬ್ ನೋಡಲ್ ಶಿಕ್ಷಕಿ ಅಮೃತವಲ್ಲಿ ಮಾಹಿತಿ ನೀಡಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಶೇಕ್ ಆದಮ್ ಸಾಹೇಬ್ ನೆಲ್ಯಾಡಿ ಮತ್ತು ಶಾಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಸಹಕರಿಸಿದರು.

LEAVE A REPLY

Please enter your comment!
Please enter your name here