ಉಪ್ಪಿನಂಗಡಿ: ಆ.27ರಿಂದ ಆ.29ರವರೆಗೆ ಶ್ರೀ ಸಾರ್ವಜನಿಕ ಗಣೇಶೋತ್ಸವ

0


ಉಪ್ಪಿನಂಗಡಿ: ಇಲ್ಲಿನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ಪೂಜಿಸಲ್ಪಡುತ್ತಿರುವ 49ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಆ.27 ರಿಂದ ಆ.29ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಸಮಿತಿಯ ಅಧ್ಯಕ್ಷ ಕೆ ಸುಧಾಕರ ಶೆಟ್ಟಿ ತಿಳಿಸಿದ್ದಾರೆ.


ಪ್ರತಿ ವರ್ಷದಂತೆ ಉಪ್ಪಿನಂಗಡಿಯ ಶ್ರೀ ಲಕ್ಷ್ಮೀ ವೆಂಕಟರಮಣ ಕಲ್ಯಾಣ ಮಂಟಪದಲ್ಲಿ ಜರಗಲಿರುವ ಈ ಕಾರ್ಯಕ್ರಮದಲ್ಲಿ ಪೂಜಿಸಲ್ಪಡುವ ಶ್ರೀ ಗಣೇಶನ ವಿಗ್ರಹವನ್ನು ಆ.26ರ ಮಂಗಳವಾರ ಸಂಜೆ 5 ಗಂಟೆಗೆ ಮೆರವಣಿಗೆಯಲ್ಲಿ ತರಲಾಗುವುದು. ಆ.27ರ ಬುಧವಾರದಂದು ಪ್ರಾರ್ಥನೆ, ಶ್ರೀ ಗಣಪತಿ ದೇವರ ವಿಗ್ರಹ ಪ್ರತಿಷ್ಠೆ , ಗಣಹೋಮ ನಡೆಯಲಿದೆ. ಅಂದೇ ಆಟೋಟ ಸ್ಪರ್ಧೆ, ರಂಗೋಲಿ ಸ್ಪರ್ಧೆ, ಚಿತ್ರ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದ್ದು, ಮೂರೂ ದಿನದ ಕಾರ್ಯಕ್ರಮದಲ್ಲಿ ಭಜನಾ ಕಾರ್ಯಕ್ರಮ ಜರಗಲಿದೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು, ರಾತ್ರಿ ಅನ್ನಸಂತರ್ಪಣೆಯೂ ನಡೆಯಲಿದೆ.


ಆ.28ರ ರಾತ್ರಿ ಧಾರ್ಮಿಕ ಸಭಾ ಕಾರ್ಯಕ್ರಮ ಜರಗಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಕೆ. ಸುಧಾಕರ ಶೆಟ್ಟಿ ವಹಿಸಲಿದ್ದಾರೆ. ಧಾರ್ಮಿಕ ಭಾಷಣವನ್ನು ದೈವ ನರ್ತಕ ಹಾಗೂ ಉಪನ್ಯಾಸಕ ರಾಗಿರುವ ಡಾ. ರವೀಶ್ ಪಡುಮಲೆ ಮಾಡಲಿದ್ದು, ಮುಖ್ಯ ಅತಿಥಿಯಾಗಿ ಉಪ್ಪಿನಂಗಡಿ ಸಿಎ ಬ್ಯಾಂಕ್ ಅಧ್ಯಕ್ಷ ಸುನಿಲ್ ಕುಮಾರ್ ದಡ್ಡು, ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಸುದರ್ಶನ್ ಎಂ., ಟೀಮ್ ದಕ್ಷಿಣ ಕಾಶಿ ಅಧ್ಯಕ್ಷ ಪ್ರಸನ್ನ ಪೆರಿಯಡ್ಕ ಭಾಗವಹಿಸಲಿದ್ದಾರೆ. ಇದೇ ಕಾರ್ಯಕ್ರಮದಲ್ಲಿ ಕಳೆದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ನಿಹಾಲ್ ಎಚ್. ಶೆಟ್ಟಿ ಅವರನ್ನು ಸನ್ಮಾನಿಸಲಾಗುವುದು. ಬಳಿಕ ರಾತ್ರಿ ಮಹಾ ರಂಗಪೂಜೆ, ಪ್ರಸಾದ ವಿತರಣೆ, ಅನ್ನಸಂರ್ಪಣೆ ಜರಗಲಿರುವುದು. ಆ.29 ರಂದು ಮಧ್ಯಾಹ್ನದ ಮಹಾಪೂಜೆ ಜರಗಿದ ಬಳಿಕ ಅನ್ನಸಂತರ್ಪಣೆಯು ನಡೆಯಲಿದ್ದು, ಸಂಜೆ ಮಹಾಪೂಜೆಯಾಗಿ ಕುಣಿತ ಭಜನೆ ಮತ್ತಿತರ ಕಲಾ ಪ್ರಕಾರಗಳ ಬಾಗಿದಾರಿಕೆಯೊಂದಿಗೆ ವೈಭವದ ಶೋಭಾಯಾತ್ರೆಯು ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.


ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಉಪಾಧ್ಯಕ್ಷ ಯು. ಯತೀಶ್ ಶೆಟ್ಟಿ, ಕಾರ್ಯದರ್ಶಿ ಜಯಪ್ರಕಾಶ್ ಶೆಟ್ಟಿ, ಕೋಶಾಧಿಕಾರಿ ಚಂದ್ರಹಾಸ್ ಹೆಗ್ಡೆ, ಜೊತೆ ಕಾರ್ಯದರ್ಶಿಗಳಾದ ಶರತ್ ಕೋಟೆ, ಕೀರ್ತನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here