ಪುತ್ತೂರು: ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಕಡಬದ ಸರಸ್ವತಿ ವಿದ್ಯಾಲಯದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಮಾಯ್ ದೆ ದೇವುಸ್ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಆರ್.ಎಂ.ಖುಷಿತ್, ಪವಿಶ್ರೀ ಆರ್., ಶೌರ್ಯ ಕೆ. ಇವರು ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.