ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂರ್ವ ಸಂಪ್ರದಾಯದಂತೆ ಹೊಸತೆನೆ (ಕದಿರು) ಕಟ್ಟುವ ಕಾರ್ಯಕ್ರಮವು ಆ.26 ರಂದು ನಡೆಯಿತು.
ಬೆಳಿಗ್ಗೆ ದೇವಳದ ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ ಅವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನ ನಡೆದ ಬಳಿಕ ಪಶ್ಚಿಮ ಭಾಗದ ಪುಷ್ಕರಣಿಯ ಬಳಿಯ ಅಶ್ವತ್ಥಕಟ್ಟೆಯವರೆಗೆ ಉತ್ಸವಮೂರ್ತಿಯೊಂದಿಗೆ ವಾದ್ಯಘೋಷದೊಂದಿಗೆ ಸಾಗಿ, ಅಲ್ಲಿ ಸಂಗ್ರಹಿಸಿಟ್ಟ ತೆನೆಗಳನ್ನು ತಂದು ಪೂಜೆ ನಡೆದು ದೇಗುಲದ ಗರ್ಭಗುಡಿ, ಪರಿವಾರ ದೇವರ ಗುಡಿಗಳು, ತೀರ್ಥಬಾವಿ, ಉಗ್ರಾಣ, ತುಳಸೀಕಟ್ಟೆ ಇತ್ಯಾದಿಗಳಿಗೆ ಕದಿರನ್ನು ಕಟ್ಟಿದ ಬಳಿಕ ನೆರೆದ ಭಕ್ತರಿಗೆ ಕದಿರನ್ನು ವಿತರಿಸಲಾಯಿತು.
ಪ್ರಥಮವಾಗಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ನಳಿನಿ ಎಸ್ ರೈ, ಕೃಷ್ಣವೇಣಿ, ವಿನಯ ಸುವರ್ಣ, ಈಶ್ವರ ಬೆಡೇಕರ್, ಸುಭಾಶ್ ರೈ ಬೆಳ್ಳಿಪ್ಪಾಡಿ, ದಿನೇಶ್ ಪಿ.ವಿ ಅವರಿಗೆ ಕದಿರು ವಿತರಿಸಿದ ಬಳಿಕ ನೆರೆದ ಭಕ್ತರಿಗೆ ವಿತರಣೆ ಮಾಡಲಾಯಿತು.
ಈ ಸಂದರ್ಭ ದೇವಳದ ಕಾರ್ಯನಿರ್ವಾಹಣಾಧಿಕಾರಿ ಕೆ.ವಿ.ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೇಖರ್ ನಾರಾವಿ, ಮಾಜಿ ಮೊಕ್ತೇಸರ ಚಿದಾನಂದ ಬೈಲಾಡಿ, ನಗರಸಭೆ ಸದಸ್ಯ ಪಿ.ಜಿ.ಜಗನ್ನಿವಾಸ ರಾವ್, ಸುದೇಶ್ ಚಿಕ್ಕಪುತ್ತೂರು, ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ನಿರ್ದೇಶಕ ಶ್ರೀಧರ್ ಪಟ್ಲ, ಕಿಟ್ಟಣ್ಣ ಗೌಡ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ರಾಧಾಕೃಷ್ಣ ನಂದಿಲ, ಕಿಲ್ಲೆ ಮೈದಾನದ ಮಹಾಗಣೇಶೋತ್ಸವದ ದೇವಾತ ಸಮಿತಿ ಅಧ್ಯಕ್ಷ ಅಭಿಜಿತ್ ಶೆಟ್ಟಿ, ಶಿವರಾಮ ಆಳ್ವ, ಶಿವಪ್ರಸಾದ್ ಶೆಟ್ಟಿ, ರಾಮಣ್ಣ ಪಿಲಿಂಜ, ರೋಶನ್ ರೈ ಬನ್ನೂರು, ಪಿ.ಜಿ.ಚಂದ್ರಶೇಖರ್ ರಾವ್, ಹರೀಶ್ ಆಚಾರ್ಯ, ಪಿ.ಕೆ.ಗಣೇಶ್ ಉಪಸ್ಥಿತರಿದ್ದರು.
ದೇವಳದ ಹೊರಾಂಗಣದ ಕಟ್ಟೆಯಲ್ಲಿ ಭಕ್ತರು ಸರದಿ ಸಾಲಿನಲ್ಲಿ ನಿಂತು ತೆನೆ ಪಡೆದುಕೊಂಡರು.