ಪುಣಚ: ಪುಣಚ ದೇವಿನಗರ ಶ್ರೀ ಮಹಮ್ಮಾಯಿ ಜೈ ಭಾರತಿ ಮರಾಟಿ ಸಂಘದ ಶ್ರೀ ಆದಿಶಕ್ತಿ ಮಹಮ್ಮಾಯಿ ಆರಾಧನಾ ಮಂದಿರದಲ್ಲಿ ಸೆ.22ರಿಂದ ಸೆ.30ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿರುವ ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಂಘದ ವಠಾರದಲ್ಲಿ ಆ.27ರಂದು ನಡೆಯಿತು.
ಶ್ರೀ ಮಹಮ್ಮಾಯಿ ಜೈ ಭಾರತಿ ಮರಾಟಿ ಸಂಘದ ಆಡಳಿತ ಸಮಿತಿ ಪದಾಧಿಕಾರಿಗಳು, ಸದಸ್ಯರು, ಪೂಜಾಸಮಿತಿ ಪದಾಧಿಕಾರಿಗಳು, ಸದಸ್ಯರು, ಸಮಾಜ ಭಾಂದವರು ಉಪಸ್ಥಿತರಿದ್ದರು.