ಪುತ್ತೂರು: ಈಶ್ವರಮಂಗಲ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವವು ಆ.27 ರಂದು ನಡೆಯಿತು.
ಬೆಳಿಗ್ಗೆ ಗಂಟೆ 8ಕ್ಕೆ ಶ್ರೀ ಗಣಪತಿ ಹೋಮ, ವಿಗ್ರಹ ಪ್ರತಿಷ್ಟೆ, 9.30 ರಿಂದ 11 ಗಂಟೆಯವರೆಗೆ ಶ್ರೀ ಪಂಚಲಿಂಗೇಶ್ವರ ಭಜನಾ ಸಂಘ ಈಶ್ವರಮಂಗಲ , ಒಡಿಯೂರು ಶ್ರೀ ಗುರುದೇವ ಗ್ರಾಮವಿಕಾಸ ಯೋಜನೆ ಈಶ್ವರಮಂಗಲ, ಮಹಾಮ್ಮಾಯ ಭಜನಾ ಸಂಘ, ಪಂಚಶ್ರೀ ಮಹಿಳಾ ಭಜನಾ ತಂಡ ಈಶ್ವರಮಂಗಲ, ಮಹಾಮ್ಮಾಯಿ ಭಜನಾ ತಂಡ ಈಶ್ವರಮಂಗಲ ಇವರಿಂದ ಭಜನಾ ಕಾರ್ಯಕ್ರಮ, ವಿದ್ಯಾರ್ಥಿಗಳಿಗೆ ಹಾಗೂ ಹಿರಿಯರಿಗೆ ವಿವಿಧ ಕ್ರೀಡೆಗಳು ನಡೆಯಿತು.

ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಮಧ್ಯಾಹ್ನ 2 ಗಂಟೆಯಿಂದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಭಕ್ತಿಗೀತೆ ಸ್ಪರ್ಧೆ ನಡೆಯಿತು. ಬಳಿಕ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಿತು.
ಈ ಸಂಧರ್ಭದಲ್ಲಿ ಪವಿತ್ರಪಾಣಿ ಗೋಪಾಲಕೃಷ್ಣ ಕುಂಜತ್ತಾಯ ಮೆಣಸಿನಕಾನ, ಗಣೇಶೋತ್ಸವ ಸಮಿತಿಯ ಅಧ್ಯಕ್ಷ ನಾಗಪ್ಪ ಗೌಡ ಬೊಮ್ಮೆಟ್ಟಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮಂಜುನಾಥ ರೈ ಸಾಂತ್ಯ, ಗೌರವಾಧ್ಯಕ್ಷ ರತನ್ ನಾೖಕ್ ಕರ್ನೂರುಗುತ್ತು, ಗಣೇಶೋತ್ಸವ ಸಮಿತಿಯ ಕಾರ್ಯದರ್ಶಿ ಪೂರ್ಣಚಂದ್ರ ನೆಲ್ಲಿತ್ತಡ್ಕ, ಉಪಾಧ್ಯಕ್ಷರುಗಳಾದ ಸುಭಾಸ್ ಚಂದ್ರ ರೈ ಮೈರೋಳು, ಚಿನ್ಮಯ ರೈ ನಡುಬೈಲು, ಖಜಾಂಚಿ ಬಿ ರಾಮಣ್ಣ ನಾಯ್ಕ ಕುತ್ಯಾಳ, ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಮೋಹನ್ ದಾಸ್ ಶೆಟ್ಟಿ ನೂಜಿಬೈಲು, ಖಜಾಂಚಿ ದೀಪಕ್ ಕುಮಾರ್ ಮುಂಡ್ಯ ಮೊದಲಾದವರು ಉಪಸ್ಥಿತರಿದ್ದರು.
ಸಂಜೆ 6 ಗಂಟೆಯಿಂದ ಶ್ರೀ ಗಣೇಶನ ಶೋಭಾಯಾತ್ರೆಯು ಕುಣಿತ ಭಜನೆ ಮತ್ತು ಭಜನಾ ತಂಡದೊಂದಿಗೆ ದೇವಸ್ಥಾನದ ವಠಾರದಿಂದ ಹೊರಟು ಈಶ್ವರಮಂಗಲ ಮುಖ್ಯ ಪೇಟೆಯಲ್ಲಿ ಸಾಗಿ ಪಟ್ಲಡ್ಕ ಹೊಳೆಯಲ್ಲಿ ವಿಸರ್ಜಿಸಲಾಯಿತು. ಸಾವಿರಾರು ಭಕ್ತಾದಿಗಳು ಭಾಗವಹಿಸಿದರು.