ಲಿಟ್ಲ್ ಫ್ಲವರ್ ಶಾಲೆಯಲ್ಲಿ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ

0

ಪುತ್ತೂರು: ದರ್ಬೆ ಲಿಟ್ಲ್ ಫ್ಲವರ್ ಶಾಲೆಯ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆ ವಹಿಸಿದ್ದರು.


ರಕ್ಷಕ ಶಿಕ್ಷಕ ಸಂಘದ ಸದಸ್ಯ, ಗ್ರಾಫಿಕ್ ಡಿಸೈನರ್ ಮಂಜುನಾಥ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿ, ಜೀವನ ಅನ್ನೋದು ಸದಾ ಗೆಲುವು ಅಲ್ಲ ಸತತ ಹೋರಾಟ. ಏನೇ ಕೆಲಸ ಮಾಡಿ ಅದರಲ್ಲಿ ಶ್ರದ್ದೆ ಇರಲಿ.ಸಾಮಾಜಿಕ ಜಾಲತಾಣ ವನ್ನು ಒಳಿತಿಗೆ ಬಳಸಿದ್ರೆ ಅದ್ಬುತ ಯಶಸ್ಸು ನಿಮ್ಮದಾಗತ್ತೆ ಎಂದರು.

ವೇದಿಕೆಯಲ್ಲಿ ನಿಯೋಜಿತ ಮುಖ್ಯ ಶಿಕ್ಷಕಿ ಭಗಿನಿ ಐರಿನ್ ವೇಗಸ್, ಕೋಸ್ಟಲ್ ಹೋಮ್ ದರ್ಬೆ ಇದರ ಮಾಲಕ ಸಂದೇಶ್ ರೈ,ರಕ್ಷಕ ಶಿಕ್ಷಕ ಸಂಘದ ಸದಸ್ಯ ಸುಕುಮಾರ್ ಹಾಗೂ ಶಿಕ್ಷಕಿ ವಿಲ್ಮಾ ಫೆರ್ನಾಂಡಿಸ್ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಶಿಲ್ಪಾ ಸುರೇಶ್ ಸ್ವಾಗತಿಸಿ,ಶಿಕ್ಷಕಿ ರಮ್ಯ ವಂದಿಸಿ ಶಿಕ್ಷಕಿ ಸಾತ್ವಿಕ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here