ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ ಆಡಳಿತ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮಂಗಳೂರು ದಕ್ಷಿಣ ವಲಯ ಸಹಕಾರದೊಂದಿಗೆ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಉಚ್ಚಿಲಗುಡ್ಡೆ, ಸೋಮೇಶ್ವರ ನೇತೃತ್ವದಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ 35 ಕಿಲೋ ಒಳಗಿನ ಕರಾಟೆ ಸ್ಪರ್ಧೆಯಲ್ಲಿ ದರ್ಬೆ ಪಾಂಗಳಾಯ ಬೆಥನಿ ಆಂಗ್ಲ ಮಾಧ್ಯಮ ಶಾಲಾ ರಿಯೊನ್ ಲಸ್ರಾದೊ ದ್ವಿತೀಯ ಸ್ಥಾನ ಪಡೆದಿದ್ದಾರೆ.
ವಿಜೇತರಿಗೆ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ. ಖಾದರ್ ರವರು ಬಹುಮಾನ ವಿತರಿಸಿ ಅಭಿನಂದಿಸಿದರು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಅನಿತಾ ಮಾರ್ಗದರ್ಶನದಲ್ಲಿ ಕರಾಟೆ ಶಿಕ್ಷಕ ತರಬೇತಿ ನೀಡಿದ್ದರು.