ಪುತ್ತೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದ ಆರೋಪಿ ಯುವಕನನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮುರ ನಿವಾಸಿ ಸಫ್ವಾನ್ ಯಾನೆ ಅಫ್ವಾನ್ ಬಂಧಿತ ಆರೋಪಿ. ಈತ ಪ.ಜಾತಿ ಸಮುದಾಯಕ್ಕೆ ಸೇರಿದ ಅಪ್ರಾಪ್ತೆಯನ್ನು ಪುಸಲಾಯಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಮಾಡಿದ್ದ ಎಂದು ಆರೋಪಿಸಲಾಗಿದೆ.ಪೋಕ್ಸೋ ಕಾಯ್ದೆ ಮತ್ತು ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.