ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಎಸಿಡಿಸಿಸಿ ಬ್ಯಾಂಕ್‌ನ ಸಾಧನಾ ಪ್ರಶಸ್ತಿ

0

ಕಾವು: ಮಾಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘ ನಿ. ಕಾವು ಇದರ ಸರ್ವಾಂಗೀಣ ಪ್ರಗತಿ, ಅಭಿವೃದ್ಧಿ, ಸಾಧನೆಯನ್ನು ಪರಿಗಣಿಸಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಸಾಧನಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಆ.30ರಂದು ಮಂಗಳೂರಿನಲ್ಲಿ ನಡೆದ ಎಸ್ ಸಿಡಿಸಿಸಿ ಬ್ಯಾಂಕ್‌ನ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನ ಅಧ್ಯಕ್ಷ ರಾಜೇಂದ್ರ ಕುಮಾರ್ ರವರು ಮಾಡ್ನೂರು ಹಾ.ಉ.ಸ.ಸಂಘದ ಅಧ್ಯಕ್ಷ, ದ.ಕ ಹಾಲು ಒಕ್ಕೂಟದ ನಿರ್ದೇಶಕರೂ ಆಗಿರುವ ಚಂದ್ರಶೇಖರ ರಾವ್ ನಿಧಿಮುಂಡ ಮತ್ತು ಬಾಲಕೃಷ್ಣ ಕೆದಿಲಾಯರವರಿಗೆ ಶಾಲು ಹೊದಿಸಿ, ಸ್ಮರಣಿಕೆ, ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ.ಜಯರಾಮ ರೈ ಬಳಜ್ಜ, ಮಾಡ್ನೂರು ಹಾ‌.ಉ.ಸ.ಸಂಘದ ನಿರ್ದೇಶಕ ಸುರೇಂದ್ರ ಬೋರ್ಕರ್ ನನ್ಯರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here