ಪುತ್ತೂರು: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ದ.ಕ, ಮಂಗಳೂರು ಹಾಗೂ ಅಕ್ಷಯ ಪದವಿ ಪೂರ್ವ ಕಾಲೇಜು ಸಂಪ್ಯ ಇದರ ಆಶ್ರಯದಲ್ಲಿ ಪುತ್ತೂರು ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟವು ಸೆ.2 ರಂದು ಅಕ್ಷಯ ಕಾಲೇಜಿನ ವಠಾರದಲ್ಲಿ ನಡೆಯಲಿದೆ.
ಸಂಪ್ಯ ಅಕ್ಷಯ ಸಮೂಹ ಸಂಸ್ಥೆಗಳ ಅಧ್ಯಕ್ಷ ಜಯಂತ್ ನಡುಬೈಲುರವರು ಪಂದ್ಯಾಟದ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸುಕುಮಾರ್ ಜೈನ್ ರವರು ಪಂದ್ಯಾಟವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಕ್ರೀಡಾ ಸಂಯೋಜಕ ಪ್ರೇಮನಾಥ್ ಶೆಟ್ಟಿ, ಅಕ್ಷಯ ಕಾಲೇಜು ಪ್ರಾಂಶುಪಾಲ ಸಂಪತ್ ಕೆ.ಪಕ್ಕಳ, ಅಕ್ಷಯ ಸಮೂಹ ಸಂಸ್ಥೆಗಳ ಆಡಳಿತಾಧಿಕಾರಿ ಅರ್ಪಿತ್ ಟಿ.ಎ, ಅಕ್ಷಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಗಂಗಾರತ್ನ, ಅಕ್ಷಯ ಪದವಿ ಪೂರ್ವ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ನವೀನ್ ಎಸ್.ರವರು ಉಪಸ್ಥಿತಲಿರುವರು ಎಂದು ಅಕ್ಷಯ ಪದವಿ ಪೂರ್ವ ಕಾಲೇಜಿನ ಪ್ರಕಟಣೆ ತಿಳಿಸಿದೆ.