ಪುಣಚ: ಪುಣಚ ಪ್ರಾ.ವ್ಯ.ಸೇವಾ ಸಹಕಾರ ಸಂಘಕ್ಕೆ ೨೦೨೪- ೨೫ನೇ ಸಾಲಿನ ಸಾಧನೆಗಾಗಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್’ನಿಂದ ಸಾಧನ ಪ್ರಶಸ್ತಿ ನೀಡಿ ಗೌರವಿಸಿದೆ.
ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕ್’ನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಸಂಘದ ಅಧ್ಯಕ್ಷ ಜನಾರ್ದನ ಭಟ್ ಅಮೈ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿನಯ ಪೂಜಾರಿ ಅವರಿಗೆ ಸಾಧನ ಪ್ರಶಸ್ತಿ ಪ್ರಧಾನ ಮಾಡಿ ಸನ್ಮಾನಿಸಿದರು. ಸಂಘದ ಉಪಾಧ್ಯಕ್ಷ ಪ್ರೀತಮ್ ಪೂಂಜ ಅಗ್ರಾಳ ಜೊತೆಗಿದ್ದರು.