ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಪುತ್ತೂರು ಹಾಗೂ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಡುಬೆಟ್ಟು, ನೆಲ್ಯಾಡಿ ಇವರ ಸಹಯೋಗದೊಂದಿಗೆ ನಡೆದ ತಾಲೂಕು ಮಟ್ಟದ 14 ವರ್ಷ ವಯೋಮಾನದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ತಂಡದ ಆಟಗಾರರಾದ ಕ್ಲೆಟನ್ ದೀಕ್ಷನ್ ತೊರಸ್ ಬೆಸ್ಟ್ ಅಟ್ಯಾಕರ್ ಪ್ರಶಸ್ತಿಯನ್ನು ಹಾಗೂ ಮೊಹಮ್ಮದ್ ಹೂದ್ ಬೆಸ್ಟ್ ಪಾಸರ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಈ ಯಶಸ್ಸಿನ ಹಿನ್ನಲೆಯಲ್ಲಿ ಶಾಲಾ ಪ್ರಾಂಶುಪಾಲರಾದ ಭಗಿನಿ ಅನಿತಾ ಅವರ ನಿರಂತರ ಪ್ರೋತ್ಸಾಹ ಮತ್ತು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನಿರಂಜನ್ ಹಾಗೂ ಅಕ್ಷಯ್ ತರಬೇತಿ ನೀಡಿದ್ದಾರೆ.