ವಿಟ್ಲ: ನೇರಳಕಟ್ಟೆ ಪ್ರಾಥಮಿಕ ಕೖಷಿ ಪತ್ತಿನ ಸಹಕಾರ ಸಂಘಕ್ಕೆ 2024-25ನೇ ಸಾಲಿನ ಸಾಧನೆಗಾಗಿ ನೀಡಲ್ಪಡುವ ಪ್ರಶಸ್ತಿಯನ್ನು ಮಂಗಳೂರಿನಲ್ಲಿ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರಧಾನ ಮಾಡಲಾಯಿತು.
ನೇರಳಕಟ್ಟೆ ಪ್ರಾಥಮಿಕ ಕೖಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಪುಷ್ಪರಾಜ ಚೌಟ ಹಾಗೂ ಮುಖ್ಯ ಕಾರ್ಯನಿರ್ವಾಹಣಧಿಕಾರಿ ಯಶೋಧ ಬಿ. ರವರಿಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಸಹಕಾರಿ ರತ್ನ ಎಂ.ಎನ್. ರಾಜೇಂದ್ರ ಕುಮಾರ್ ಅವರು ಮಂಗಳೂರಿನಲ್ಲಿ ನಡೆದ ಬ್ಯಾಂಕ್ ನ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕರುಗಳಾದ ಟಿ.ಜಿ. ರಾಜಾರಾಮ ಭಟ್, ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್ ಬಿ ಜಯರಾಮ ರೈ, ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ತನಿಯಪ್ಪ ಗೌಡ ಮೊದಲಾದವರು ಉಪಸ್ಥಿತರಿದ್ದರು.