ಪುತ್ತೂರು:ಪುತ್ತೂರು ದ್ವಾರಕ ಪ್ರತಿಷ್ಠಾನ(ರಿ)ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆಯಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಸಾಂದೀಪನಿ ಗುರು ಪ್ರಶಸ್ತಿ ಪ್ರಧಾನ ಸಮಾರಂಭ ಸೆ.5ರಂದು ನಡೆಯಿತು.
ಈ ಸಮಾರಂಭದ ಅಧ್ಯಕ್ಷತೆಯನ್ನು ದ್ವಾರಕ ಪ್ರತಿಷ್ಠಾನ (ರಿ) ಪುತ್ತೂರು ಇದರ ಅಧ್ಯಕ್ಷ ಗೋಪಾಲಕೃಷ್ಣ ಭಟ್ ವಹಿಸಿ ಮಾತನಾಡಿ, ಸಮಾಜದ ಶ್ರೇಷ್ಠ ಶಿಕ್ಷಕರನ್ನು ಗುರುತಿಸಿ ಸನ್ಮಾನಿಸುವುದು ಶಿಕ್ಷಕರ ದಿನದ ಅರ್ಥಪೂರ್ಣ ಆಚರಣೆಯಾಗಿದೆ ಮತ್ತು ದ್ವಾರಕಾ ಸಂಸ್ಥೆಯು ಈ ಕಾರ್ಯವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ ಎಂದರು.ಸಮಾರಂಭದಲ್ಲಿ ಶ್ರೀಯುತ ಕೆ ಜಯರಾಜ ಆಚಾರ್ಯ ಕಳತ್ತಜೆ, ನಿವೃತ್ತ ಶಿಕ್ಷಕರು ಇವರಿಗೆ ಸಾಂದೀಪನಿ ಗುರು ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಜಯರಾಜ ಆಚಾರ್ಯ ಕಳತ್ತಜೆಯವರ ವೃತ್ತಿ ಜೀವನ ಹಾಗೂ ಶಿಕ್ಷಣ ಸೇವೆಯ ಕುರಿತು ದ್ವಾರಕಾ ಪ್ರತಿಷ್ಠಾನದ ಕಾರ್ಯದರ್ಶಿ ಗಣರಾಜ ಕುಂಬ್ಳೆ ಇವರು ಅಭಿನಂದನಾ ಮಾತುಗಳನ್ನಾಡಿದರು.ಪ್ರೌಢ ಶಾಲಾ ವಿಭಾಗದ ಮುಖ್ಯ ಗುರು ಸುಮನ ಬಿ ಶ್ರೀ .ಕೆ. ಜಯರಾಜ ಆಚಾರ್ ಕಳತ್ತಜೆಯವರ ಪ್ರಶಸ್ತಿ ಪತ್ರವನ್ನು ವಾಚಿಸಿದರು. ದ್ವಾರಕಾ ಸಂಸ್ಥೆಗಳ ಅಧ್ಯಕ್ಷ ಗೋಪಾಲಕೃಷ್ಣ ಭಟ್, ನಿವೃತ್ತ ಶಿಕ್ಷಕ ಕೆ ಜಯರಾಜ ಆಚಾರ್ಯ ಮತ್ತು ದಂಪತಿಗಳನ್ನು ಸನ್ಮಾನಿಸಿದರು. ಬಳಿಕ ಮಾತನಾಡಿದ ಕಳತ್ತಜೆಯವರು ಶಿಕ್ಷಕರ ವೃತ್ತಿಧರ್ಮ ಹಾಗೂ ವೃತ್ತಿಪರತೆಯ ಕುರಿತು ಅನುಭವವನ್ನು ಹಂಚಿಕೊಂಡರು.
ವೇದಿಕೆಯಲ್ಲಿ ಶ್ರೀಕೃಷ್ಣ ವಿದ್ಯಾ ಸಂಸ್ಥೆಯ ಸಂಚಾಲಕ ವಿಘ್ನೇಶ್ ಹಿರಣ್ಯ, ಗಣರಾಜ್ಯ ಕುಂಬ್ಳೆ, ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ರಾಜಗೋಪಾಲ್, ಪ್ರತಿಭಾ ಪ್ರೌಢಶಾಲೆಯ ಮುಖ್ಯ ಗುರು ಸುಮನ ಮಾತಾಜಿ ಅವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್, ಜಿ ಕೃಷ್ಣ, ನಿವೃತ್ತ ಮುಖ್ಯ ಗುರು ನಾರಾಯಣ ಪಾಟಾಳಿ, ನಿವೃತ್ತ ಮುಖ್ಯ ಗುರು ಶಂಕರಿ ,ಕೆ.ಜಯರಾಜ್ ಆಚಾರ್ಯರ ಕುಟುಂಬಸ್ಥರು ಉಪಸ್ಥಿತರಿದ್ದರು.
ಶಿಕ್ಷಕರಿಗಾಗಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು. ಶಿಕ್ಷಕರಿಗೆ ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರನ್ನು, ಗೌರವಿಸಲಾಯಿತು. ಆಟೋಟ ಸ್ಪರ್ಧೆಯಲ್ಲಿ ವಿಜೇತರಾದ ಬಹುಮಾನದ ಪಟ್ಟಿಯನ್ನು ವಿಶ್ವನಾಥ್ ಬಿ ವಾಚಿಸಿದರು. ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕ ವಿಘ್ನೇಶ್ ಹಿರಣ್ಯ ಸ್ವಾಗತಿಸಿ, ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರು ರಾಜಗೋಪಾಲ್ ವಂದಿಸಿದರು.ಭವಿತಾ ಕಾರ್ಯಕ್ರಮವನ್ನು ನಿರೂಪಿಸಿದರು.