ಉಪ್ಪಿನಂಗಡಿ: ಸಹಕಾರಿ ವ್ಯವಸಾಯಿಕ ಸಂಘ ಉಪ್ಪಿನಂಗಡಿ ಇದರ 2024-25ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.7ರಂದು ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ- ಮಹಾಕಾಳಿ ದೇವಸ್ಥಾನದ ನೇತ್ರಾವತಿ ಸಮುದಾಯ ಭವನದಲ್ಲಿ ನಡೆಯಲಿದೆ.
ಸಂಘದ ಅಧ್ಯಕ್ಷರಾದ ಸುನೀಲ್ ಕುಮಾರ್ ದಡ್ಡು ಅವರ ಅಧ್ಯಕ್ಷತೆಯಲ್ಲಿ ಪೂರ್ವಾಹ್ನ 10.30ಕ್ಕೆ ಸಭೆ ನಡೆಯಲಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೋಭಾ ಕೆ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.