ಪುತ್ತೂರು: ಬೆಳಂದೂರು ಈಡನ್ ಗ್ಲೋಬಲ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಇನ್ಸೈಟ್ ಐಕಾನ್ ಎಂಬ ಹೆಸರಿನ ಮೂಲಕ ಆಚರಿಸಲಾಯಿತು. ಅರೇಬಿಕ್ ವಿಭಾಗದ ಮುಖ್ಯಸ್ಥ ರಶೀದ್ ಸಖಾಫಿ ಪ್ರಾರ್ಥನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಸ್ಥೆಯ ಕಾರ್ಯದರ್ಶಿ ಬಶೀರ್ ಹಾಜಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಂಸ್ಥೆಯ ಆಡಳಿತ ಸಮಿತಿ ಸದಸ್ಯ ಖಾದರ್ ಹಾಜಿ ಶಿಕ್ಷಕರಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಇನ್ಶೈಟ್ ಐಕಾನ್ ಮ್ಯಾಗಜಿನ್ ಬಿಡುಗಡೆ ಮಾಡಲಾಯಿತು. ಸಂಸ್ಥೆಯ ಪ್ರಾಂಶುಪಾಲ ರಂಝೀ ಮುಹಮ್ಮದ್ ಶಿಕ್ಷಕರ ದಿನಾಚರಣೆಯ ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ವರ್ಗದವರಿಗೆ ಸ್ಮರಣಿಕೆ ನೀಡಿ ಗೌರವಿಸುದರು. ನಂತರ ವಿದ್ಯಾರ್ಥಿಗಳು ಶಿಕ್ಷಕರಿಗೆ ವಿವಿಧ ಮನರಂಜನೆಯ ಸ್ಪರ್ಧೆಗಳನ್ನು ನಡೆಸಿದರು. ಹತ್ತನೇ ತರಗತಿಯ ವಿದ್ಯಾರ್ಥಿಗಳು ಕಾರ್ಯಕ್ರಮ ನಿರ್ವಹಿಸಿದರು. ಎಲ್ಲಾ ಬೋಧಕ ಹಾಗೂ ಬೋಧಕೇತರ ವರ್ಗದವರು ಉಪಸ್ಥಿತರಿದ್ದರು. ಶಿಕ್ಷಕಿ ದಿಲ್ಶಾನ ಸ್ವಾಗತಿಸಿದರು. ವಿದ್ಯಾರ್ಥಿನಿ ಶಝ ಫಾತಿಮಾ ಕಾರ್ಯಕ್ರಮ ನಿರೂಪಿಸಿದರು. ಶಾಲಾ ನಾಯಕಿ ರೀಮಾ ಶಮ್ರಿನ್ ವಂದಿಸಿದರು.