ಕೋಮು ಸೌಹಾರ್ದತೆ ಹಾಳುಗೆಡವಲು ಯತ್ನ ಆರೋಪ- ಪ್ರಕರಣ ದಾಖಲು

0

ಪುತ್ತೂರು:ಕೋಮು ಸೌಹಾರ್ದತೆ ಹಾಳುಗೆಡವಲು ಯತ್ನಿಸಿದ ಆರೋಪದಲ್ಲಿ ಹಿಂಜಾವೇ ಮುಖಂಡ ನರಸಿಂಹ ಶೆಟ್ಟಿ ಮಾಣಿ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸೆ.4ರಂದು ರಾತ್ರಿ ಬಂಟ್ವಾಳ ಪೆರ್ನೆ ಗ್ರಾಮದ ಕಡಂಬು ಎಂಬಲ್ಲಿನ ಮನೆ ಬಳಿಯಿರುವ ಹಟ್ಟಿಯಿಂದ ಕಿಡಿಗೇಡಿಗಳು ದನವೊಂದನ್ನು ಕಳವು ಮಾಡಿ ಹತ್ಯೆ ಮಾಡಿರುವ ಘಟನೆಯ ಬಗ್ಗೆ ನರಸಿಂಹ ಶೆಟ್ಟಿ ಮಾಣಿ ಮಾತನಾಡುವ ವೇಳೆ, ಸದ್ರಿ ಘಟನೆಯ ಬಗ್ಗೆ ಸುಳ್ಳು ಸುದ್ದಿಯನ್ನು ನೀಡಿರುವುದಲ್ಲದೇ, ಧರ್ಮಧರ್ಮಗಳ ನಡುವೆ ಕೋಮುದ್ವೇಷ ಹಾಗೂ ವೈರತ್ವ ಉಂಟಾಗುವಂತೆ ಪ್ರಚೋದನಕಾರಿಯಾಗಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿರುವುದು ಕಂಡುಬಂದಿದೆ.ಇದರಿಂದಾಗಿ ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯಾಗುವ ಹಾಗೂ ಸಾರ್ವಜನಿಕ ವಲಯದಲ್ಲಿ ಭಯಭೀತಿ ಉಂಟಾಗುವ ಸಾಧ್ಯತೆಗಳಿರುವುದರಿಂದ ನರಸಿಂಹ ಶೆಟ್ಟಿ ಮಾಣಿ ಎಂಬಾತನ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ(ಅ.ಕ್ರ: 132/2025)ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here