ಪುತ್ತೂರು: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಮೌಂಟನ್ ವ್ಯೂ ಆಂಗ್ಲ ಮಾಧ್ಯಮ ಶಾಲೆ, ಸಾಲ್ಮರ ಇವರ ಸಂಯುಕ್ತ ಆಶ್ರಯದಲ್ಲಿ ಸೆ.8ರಂದು ನಡೆದ ವಲಯ ಮಟ್ಟದ 14 ವರ್ಷ ಮತ್ತು 17 ವರ್ಷ ವಯೋಮಾನದ ಬಾಲಕ-ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ನಾಲ್ಕೂ ತಂಡಗಳು ಅದ್ವಿತೀಯ ಸಾಧನೆ ಮಾಡಿ ತಾಲೂಕು ಮಟ್ಟಕ್ಕೆ ಪ್ರವೇಶಿಸಿವೆ.
17 ವರ್ಷ ವಯೋಮಾನದ ಬಾಲಕ ಹಾಗೂ ಬಾಲಕಿಯರ ತಂಡಗಳು ಪ್ರಥಮ ಸ್ಥಾನ ಹಾಗೂ14 ವರ್ಷ ವಯೋಮಾನದ ಬಾಲಕ ಹಾಗೂ ಬಾಲಕಿಯರ ತಂಡಗಳಲ್ಲಿಯೂ ಶಾಲಾ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.
ಶಾಲಾ ಪ್ರಾಂಶುಪಾಲೆ ಭಗಿನಿ ಅನಿತಾ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಹರೀಶ್, ರಂಜನ್ ಮತ್ತು ಅಕ್ಷಯ್ ಅವರು ತರಬೇತಿ ನೀಡಿರುತ್ತಾರೆ.