ಪುತ್ತೂರು:ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾನಿಲಯ 2024 -25ನೇ ಸಾಲಿನಲ್ಲಿ ನಡೆಸಿದ ಭರತನಾಟ್ಯ ಜ್ಯೂನಿಯರ್ ಪರೀಕ್ಷೆಯಲ್ಲಿ ಪುತ್ತೂರಿನ ನೃತ್ಯೋಪಾಸನ ಕಲಾ ಅಕಾಡೆಮಿ (ರಿ) ಯ ನೃತ್ಯಗುರು ವಿದುಷಿ ಶಾಲಿನಿ ಆತ್ಮಭೂಷಣ್ ಇವರ ಶಿಷ್ಯೆ ಆದ್ಯಲಕ್ಷ್ಮೀ ಕೆ ಇವರು 400 ರಲ್ಲಿ 389 ಅಂಕ ಪಡೆದು ಶೇಕಡಾ 97.25% ಫಲಿತಾಂಶದೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಹೊಂದಿರುತ್ತಾಳೆ.
ಈಕೆ ಪುತ್ತೂರಿನ ಬೊಳುವಾರಿನಲ್ಲಿರುವ ಅಕ್ಷಯ ಕಂಪ್ಯೂಟರ್ಸ್ ಮಾಲಕ ಕೃಷ್ಣಪ್ರಸಾದ್ ಕೆ ಹಾಗೂ ವಿವೇಕಾನಂದ ಪದವಿ ಕಾಲೇಜಿನ ಉಪನ್ಯಾಸಕಿ ಅನ್ನಪೂರ್ಣ ಇವರ ಪುತ್ರಿ. ಪ್ರಸ್ತುತ ಇವರು ವಿವೇಕಾನಂದ ಸೆಂಟ್ರಲ್ ಸ್ಕೂಲ್ ನಲ್ಲಿ 7 ನೇ ತರಗತಿಯ ವಿದ್ಯಾರ್ಥಿನಿ.