ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ- ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ನಡೆದ ಪುತ್ತೂರುತಾಲೂಕು ಮಟ್ಟದ 14ರ ವಯೋಮಾನದ ಬಾಲಕ ಮತ್ತು ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಬಾಲಕರತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಮತ್ತು ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದು ಐದು ವಿದ್ಯಾರ್ಥಿನಿಯರು ಜಿಲ್ಲಾಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಲು ಅರ್ಹತೆ ಗಳಿಸಿದ್ದಾರೆ. ಇವರಿಗೆ ತರಬೇತುದಾರರಾಗಿ ಮನೋಹರ್ ಮತ್ತು ಶಾಲಾ ದೈಹಿಕ ಶಿಕ್ಷಣ ಶಿಕ್ಷಕರಾದ ದಾಮೋದರ್, ಹರಿಣಾಕ್ಷಿ ಮತ್ತು ಅಶ್ವಿತಾ ತರಬೇತಿ ನೀಡಿದ್ದರು.

LEAVE A REPLY

Please enter your comment!
Please enter your name here