ಪುತ್ತೂರು: ಜಿ.ಎಲ್ ಕಾಂಪ್ಲೆಕ್ಸ್ ನಲ್ಲಿ ಕಾರ್ಯಾಚರಿಸುತ್ತಿರುವ ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘದ 45ನೇ ವಾರ್ಷಿಕ ಮಹಾಸಭೆಯು ಸೆ.14 ರಂದು ಬೊಳ್ವಾರು ಮಹಾವೀರ ವೆಂಚರ್ಸ್ ರೂಫ್ ಟಾಪ್ ಸಭಾಂಗಣದಲ್ಲಿ ಜರಗಲಿದೆ.
ಮುಖ್ಯ ಅತಿಥಿಯಾಗಿ ಚಾರ್ಟರ್ಡ್ ಅಕೌಂಟೆಂಟ್ ಶಿವಕುಮಾರ್ ಹಿಲ್ಲೆಮನೆ ರವರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ದ್ವಾರಕಾ ಕಾರ್ಪೋರೇಷನ್ ಪ್ರೈ.ಲಿಮಿಟೆಡ್ ನ ಗೋಪಾಲಕೃಷ್ಣ ಭಟ್, ದರ್ಬೆ ವಿನಾಯಕ ಎಂಟರ್ಪ್ರೈಸಸ್ ನ ಹರಿಪ್ರಸಾದ್ ಪ್ರಭುರವರನ್ನು ಸನ್ಮಾನಿಸಲಾಗುತ್ತದೆ. ಸದಸ್ಯರು ಮಹಾಸಭೆಗೆ ಹಾಜರಾಗಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಸಂಘದ ಅಭಿವೃದ್ಧಿಯಲ್ಲಿ ಸಹಕರಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ 9342944566, 9480230878, 9448120787 ನಂಬರಿಗೆ ಸಂಪರ್ಕಿಸಬಹುದು ಎಂದು ಅಧ್ಯಕ್ಷ ಪಿ.ವಾಮನ ಪೈ, ಪ್ರಧಾನ ಕಾರ್ಯದರ್ಶಿ ಮನೋಜ್ ಟಿ.ವಿ, ಕೋಶಾಧಿಕಾರಿ ಉಲ್ಲಾಸ್ ಪೈ, ಉಪಾಧ್ಯಕ್ಷರಾದ ರವಿಕೃಷ್ಣ ಡಿ.ಕಲ್ಲಾಜೆ, ರಮೇಶ್ ಪ್ರಭುರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.