ಪುತ್ತೂರು: ಪುಣಚ ಗ್ರಾಮ ಪಂಚಾಯತ್‌ನ 2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಬೇಬಿ ಯಾನೆ ಯಶೋಧಾರವರ ಅಧ್ಯಕ್ಷತೆಯಲ್ಲಿ ಸೆ.11 ರಂದು ಪೂರ್ವಾಹ್ನ ಗಂಟೆ 10.30ಕ್ಕೆ ಪುಣಚ ಗ್ರಾಮ ಪಂಚಾಯತ್‌ನ ಸುವರ್ಣ ಸೌಧ ಸಭಾಂಗಣದಲ್ಲಿ ಜರಗಲಿರುವುದು. ತಾಲೂಕು ಆರೋಗ್ಯಾಧಿಕಾರಿ ಅಶೋಕ್ ಕುಮಾರ್ ರೈಯವರು ಮಾರ್ಗದರ್ಶಿ ಅಧಿಕಾರಿಯಾಗಿ ಸಭೆ ನಡೆಸಿಕೊಡಲಿದ್ದಾರೆ. ಆದುದರಿಂದ ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಮತದಾರ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮ ಸಭೆಯಲ್ಲಿ ಭಾಗವಹಿಸಿ, ಗ್ರಾಮಾಭಿವೃದ್ಧಿಗೆ ಸಂಬಂಧಪಟ್ಟ ಸಲಹೆ ಸೂಚನೆಗಳನ್ನು ನೀಡುವಂತೆಯೂ ಹಾಗೂ ಸರಕಾರದ ವಿವಿಧ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು, ಅರ್ಹ ಫಲಾನುಭವಿಗಳನ್ನು ಗುರುತಿಸುವಂತೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಬೇಬಿ ಯಾನೆ ಯಶೋಧಾ, ಉಪಾಧ್ಯಕ್ಷ ಮಹೇಶ್ ಶೆಟ್ಟಿ ಬೈಲುಗುತ್ತು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ, ದ್ವಿತೀಯ ದರ್ಜೆ ಲೆಕ್ಕಸಹಾಯಕಿ ಪಾರ್ವತಿ ಹಾಗೂ ಸರ್ವ ಸದಸ್ಯರುಗಳು ಮತ್ತು ಸಿಬ್ಬಂದಿ ವರ್ಗದ ಪ್ರಕಟಣೆ ತಿಳಿಸಿದೆ.