ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಮತ್ತು ಸ್ಟಾರ್ ಆಪ್ಟಿಕಲ್ಸ್ ಪುತ್ತೂರು ವತಿಯಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರು ಇಲ್ಲಿನ ವಿದ್ಯಾರ್ಥಿಗಳಿಗಾಗಿ ಉಚಿತ ನೇತ್ರ ತಪಾಸಣಾ ಶಿಬಿರ ಇತ್ತೀಚೆಗೆ ಜರಗಿತು.
ಕರ್ನಾಟಕ ಪಬ್ಲಿಕ್ ಸ್ಕೂಲ್ ಎಸ್.ಡಿ.ಎಂ.ಸಿ ಕಾರ್ಯಾಧ್ಯಕ್ಷರಾದ ಎ. ಕೆ. ಜಯರಾಮ ರೈ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಅಧ್ಯಕ್ಷರಾದ ಚಂದ್ರಹಾಸ ರೈ ಸಭಾಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಪ್ರಾಂಶುಪಾಲರಾದ ಹಸೀನಾ ಬಾನು ಕೆ. ಇ. ಮುಖ್ಯ ಅತಿಥಿಗಳಾಗಿದ್ದರು. ರೋಟರಿ ಕಮ್ಯುನಿಟಿ ಸರ್ವಿಸ್ ಡೈರೆಕ್ಟರ್ ಮಹಮ್ಮದ್ ರಫೀಕ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್ ಕಾರ್ಯದರ್ಶಿ ಜಯಪ್ರಕಾಶ್ ಎ. ಎಲ್, ಸ್ಟಾರ್ ಆಪ್ಟಿಕಲ್ಸ್ ನ ತಬ್ಸೀರ್ ಮತ್ತು ರಮೇಶ ರೈ ಬೋಳೋಡಿ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಅನ್ವಿತಾ ಪ್ರಾರ್ಥಿಸಿದರು. ಉಪ ಪ್ರಾಂಶುಪಾಲರಾದ ವಿನೋದ್ ಕುಮಾರ್ ಕೆ.ಎಸ್ ಸ್ವಾಗತಿಸಿ, ಉಪನ್ಯಾಸಕ ಇಸ್ಮಾಯಿಲ್ ಪಿ. ವಂದಿಸಿದರು. ಉಪನ್ಯಾಸಕ ಬಾಲಕೃಷ್ಣ ಬೇರಿಕೆ ಕಾರ್ಯಕ್ರಮ ನಿರೂಪಿಸಿದರು. ಫಾತಿಮತ್ ರೀಶಾ ಸಹಕರಿಸಿದರು.