ವಿಜ್ಞಾನ ಹಾಗೂ ಗಣಿತ ಮಾದರಿ ಸ್ಪರ್ಧೆಯಲ್ಲಿ ಸಾತ್ವಿಕ್ ಹಾಗೂ ಮಂದಿರಾ ಕಜೆ ಪ್ರಥಮ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ವಿದ್ಯಾರ್ಥಿಗಳು ವಿದ್ಯಾಭಾರತಿ ಅಖಿಲ ಭಾರತೀಯ ಸಂಸ್ಥಾನವು ಮೈಸೂರಿನ ಗೋಪಾಲಸ್ವಾಮಿ ವಿದ್ಯಾಲಯದಲ್ಲಿ ಆಯೋಜಿಸಿದ ರಾಜ್ಯಮಟ್ಟದ ವಿಜ್ಞಾನ ಮತ್ತು ಗಣಿತ ಮಾದರಿ ಸ್ಪರ್ಧೆಯಲ್ಲಿ ಭಾಗವಹಿಸಿ, ಬಹುಮಾನಗಳನ್ನು ಪಡೆಯುವ ಮೂಲಕ ಝೋನಲ್ ಹಂತಕ್ಕೆ ಆಯ್ಕೆಯಾಗಿದ್ದಾರೆ.
ಕಿಶೋರವರ್ಗದ ಗಣಿತ ಮಾದರಿ ಪ್ರದರ್ಶನದಲ್ಲಿ 9ನೇ ತರಗತಿಯ ವಿದ್ಯಾರ್ಥಿ, ಗಿರೀಶ ಗೌಡ ಮತ್ತು ಸುಮಿತ್ರಾ ದಂಪತಿಗಳ ಪುತ್ರ ಸಾತ್ವಿಕ್ ಜಿ ಪ್ರಥಮ ಸ್ಥಾನ, ಕಿಶೋರ ವರ್ಗದ ವಿಜ್ಞಾನ ಪತ್ರ ವಾಚನ ಸ್ಪರ್ಧೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿ, ಮಹೇಶ್ ಕಜೆ ಹಾಗೂ ದೀಪಿಕಾ ಕಜೆ ದಂಪತಿಯ ಪುತ್ರಿ ಮಂದಿರಾ ಕಜೆ ಪ್ರಥಮ ಸ್ಥಾನವನ್ನು ಗಳಿಸಿಕೊಂಡಿದ್ದಾರೆ. ಇವರಿಬ್ಬರೂ ಮುಂದೆ ನಡೆಯುವ ಝೋನಲ್ ಹಂತದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

ಅಂತೆಯೇ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಾದ, ಪ್ರವೀಣ್ ರಾವ್ ಮತ್ತು ಸುಗಂಧಿನಿ ದಂಪತಿ ಪುತ್ರ ಪ್ರಿಯಾಂಶು ರಾವ್, ಸುರೇಶ್ ಎಸ್ ಶೆಟ್ಟಿ ಮತ್ತು ನೈನಾ ದಂಪತಿ ಪುತ್ರ ಕನಿಷ್ಕ್ ಎನ್ ಶೆಟ್ಟಿ ಹಾಗೂ 9ನೇ ತರಗತಿ ವಿದ್ಯಾರ್ಥಿ, ಮಧುಸೂದನ್ ಸಾಲೆ ಮತ್ತು ವಿನುತಾ ಎಮ್ ಸಾಲೆ ದಂಪತಿ ಪುತ್ರ ಅನಿತೇಜ್ ಎಮ್ ಸಾಲೆ ಅವರ ತಂಡ ತೃತೀಯ ಸ್ಥಾನವನ್ನು ಪಡೆದುಕೊಂಡಿದೆ.