ಪುತ್ತೂರು: ಕರ್ನಾಟಕ ರಾಜ್ಯ ಭಾವೈಕ್ಯತಾ ಪರಿಷತ್ ವತಿಯಿಂದ ಸಾಧಕರಿಗೆ ನೀಡುವ ’ಸಮಾಜ ರತ್ನ’ ಪ್ರಶಸ್ತಿಗೆ ಸಮಾಜ ಸೇವಕ ಝೈನುಲ್ ಆಬೀದ್ ಲಕ್ಷೇಶ್ವರ ಆಯ್ಕೆಯಾಗಿದ್ದಾರೆ.
ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮದ ಹನುಮಾನ್ ನಗರ ಬಹದ್ದೂರ್ ನಿವಾಸಿಯಾಗಿರುವ ಝೈನುಲ್ ಆಬೀದ್ ಲಕ್ಷೇಶ್ವರ ಅವರು ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸೆ.14ರಂದು ಮಂಗಳೂರಿನ ದೇರಳಕಟ್ಟೆಯಲ್ಲಿ ನಡೆಯುವ ರಾಜ್ಯ ಮಟ್ಟದ ಚುಟುಕು ಕವಿಗೋಷ್ಟಿಯಲ್ಲಿ ಸ್ಪೀಕರ್ ಯು.ಟಿ.ಖಾದರ್ರವರ ಸಮ್ಮುಖದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.