ವಿಟ್ಲ: ಆಟೋರಿಕ್ಷಾ ನಿಲ್ದಾಣದ ಬಳಿ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಇನ್ನೋವಾ ಕಾರು ಡಿಕ್ಕಿಯಾಗಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಪೆರಾಜೆ ಗ್ರಾಮದ ಗಡಿಯಾರ ಸಮೀಪ ಸಂಭವಿಸಿದೆ.
ಕಾರು ಚಾಲಕ ಇನ್ನೋವಾ ಕಾರನ್ನು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಚಲಾಯಿಸುತ್ತ ಹೋಗುತ್ತಿದ್ದ ವೇಳೆ ಬಂಟ್ವಾಳ ತಾಲೂಕು ಪೆರಾಜೆ ಗ್ರಾಮದ ಗಡಿಯಾರ ಆಟೋರಿಕ್ಷಾ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದು ಬದಿಯಿಂದ ಮತ್ತೊಂದು ಬದಿಗೆ ದಾಟುತ್ತಿದ್ದ ಶಂಶುದ್ದೀನ್ ಅವರಿಗೆ ಕಾರು ಡಿಕ್ಕಿಯಾಗಿ ರಸ್ತೆಗೆ ಎಸೆಯಲ್ಪಟ್ಟು ಗಂಭಿರ ಗಾಯಗಳಾಗಿದ್ದು, ಚಿಕಿತ್ಸೆಗೆ ತುಂಬೆ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿನ ವೈದ್ಯರು ಪರೀಕ್ಷಿಸಿ ಗಾಯಾಳು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.